ಬೆಂಗಳೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್ ಅಧಿಕಾರಿ ಡಿ ರೂಪಾ ಮೌದ್ಗಿಲ್ ನಡುವಣ ಸಂಘರ್ಷ ತಾರಕ್ಕೇರಿದ ಬೆನ್ನಲ್ಲೇ ಎಚ್ಚೆತ್ತ ರಾಜ್ಯ ಸರ್ಕಾರ ಇಬ್ಬರನ್ನೂ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ರೋಹಿಣಿ ಸಿಂಧೂರಿ ಮತ್ತು ಡಿ.ರೂಪಾ ಅವರನ್ನು ವರ್ಗಾವಣೆ ಮಾಡಿದ್ದು, ಯಾವುದೇ ಹುದ್ದೆಯನ್ನು ತೋರಿಸಿಲ್ಲ.

ಡಿ.ರೂಪಾ ಅವರ ಪತಿ, ಐಎಎಸ್ ಅಧಿಕಾರಿ ಮುನೀಶ್ ಮೌದ್ಗಿಲ್ ಅವರನ್ನು ಆಡಳಿತ ಸುಧಾರಣೆ ಮತ್ತು ಸಿಬ್ಬಂದಿ ಇಲಾಖೆ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.

‘ಶಾಸಕ ಸಾ.ರಾ. ಮಹೇಶ್ ಜತೆ ಸಿಂಧೂರಿ ಸಂಧಾನಕ್ಕೆ ಯತ್ನಿಸಿದ್ದಾರೆ’ ಎಂಬ ಸುದ್ದಿಯನ್ನು ಪ್ರಸ್ತಾಪಿಸಿದ್ದ ರೂಪಾ ಭಾನುವಾರ ಜಾಲತಾಣಗಳಲ್ಲಿ ತೀವ್ರ ವಾಗ್ದಾಳಿ ನಡೆಸಿದ್ದರು. ಅವರಿಗೆ ಸಂಬಂಧಿಸಿದ 20 ಪ್ರಶ್ನೆಗಳಿಗೆ ಉತ್ತರಿಸುವಂತೆ ಸವಾಲು ಹಾಕಿದ್ದರು. ಅದಕ್ಕೆ ಪ್ರತಿಕ್ರಿಯೆ ನೀಡಿದ್ದ ಸಿಂಧೂರಿ, ‘ವೈಯಕ್ತಿಕ ಹಗೆ ಸಾಧಿಸುವುದಕ್ಕಾಗಿ ಮಾನಸಿಕ ಸ್ಥಿಮಿತ ಕಳೆದುಕೊಂಡವರಂತೆ ವರ್ತಿಸುತ್ತಿದ್ದಾರೆ. ಮಾನಸಿಕ ಅಸ್ವಸ್ಥತೆಗೆ ಒಳಗಾದರೆ ಅದು ಸಮಾಜಕ್ಕೆ ಬಹುದೊಡ್ಡ ಅಪಾಯಕಾರಿ ಬೆಳವಣಿಗೆ’ ಎಂದಿದ್ದರು.

ಅಧಿಕಾರಿಗಳ ಬೀದಿಜಗಳದಿಂದ ಮುಜುಗರಕ್ಕೆ ಒಳಗಾಗಿರುವ ಸರ್ಕಾರ, ಶಿಸ್ತು ಉಲ್ಲಂಘನೆ, ದುರ್ನಡತೆ, ಸರ್ಕಾರದ ಸೇವಾ ನಿಯಮಗಳನ್ನು ಉಲ್ಲಂಘಿಸಿದ್ದಕ್ಕೆ ಇಬ್ಬರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮುಖ್ಯಕಾರ್ಯದರ್ಶಿಗೆ ಸೂಚಿಸಿದೆ. ಇಬ್ಬರಿಗೂ ನೋಟಿಸ್ ನೀಡಲಾಗಿದೆ.

‘ಮುಖ್ಯಕಾರ್ಯದರ್ಶಿ ಇಬ್ಬರನ್ನೂ ಕರೆದು ಮಾತನಾಡಿದ್ದಾರೆ. ಅವರು ನೀಡಿರುವ ದೂರಿನ ಪತ್ರದ ಆಧಾರದಲ್ಲಿ ಕ್ರಮ ಕೈಗೊಳ್ಳಲು ಪರಿಶೀಲಿಸುತ್ತಿದ್ದಾರೆ. ಮಾಧ್ಯಮಗಳಿಂದ ಅಂತರ ಕಾಪಾಡಿಕೊಂಡು, ಶಿಸ್ತು ಕಾಪಾಡುವುದಾಗಿ ಇಬ್ಬರೂ ಒಪ್ಪಿಕೊಂಡಿದ್ದಾರೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದರು.

ಸರ್ಕಾರ ಎಚ್ಚರಿಕೆ ನೀಡಿದ ಬಳಿಕವೂ ರೋಹಿಣಿ ಸಿಂಧೂರಿ ಹಾಗೂ ಡಿ.ರೂಪಾ ಮಧ್ಯದ ಜಟಾಪಟಿ ಸೋಮವಾರವೂ ಸಾಮಾಜಿಕ ಜಾಲ ತಾಣಗಳಲ್ಲಿ ಮುಂದುವರಿದಿತ್ತು.

ಇವನ್ನೂ ಓದಿ...

ರೋಹಿಣಿ ವಿರುದ್ಧ ಡಿ ರೂಪಾ ಎತ್ತಿರುವ ಪ್ರಶ್ನೆಗಳು ಸರಿ ಇವೆ: ಪ್ರತಾಪ ಸಿಂಹ

ರೋಹಿಣಿ ಸಿಂಧೂರಿ ವಿರುದ್ಧ ಡಿ.ರೂಪಾ 19 ಆರೋಪ : ಡಿ.ಕೆ ರವಿ ಹೆಸರೂ ಪ್ರಸ್ತಾಪ

ರೋಹಿಣಿ ಸಿಂಧೂರಿ ಸಂದೇಶ ಕಳುಹಿಸಿದ್ದು ಯಾರಿಗೆ?: ರೂಪಾಗೆ ನೆಟ್ಟಿಗರ ಪ್ರಶ್ನೆ

ಖಾಸಗಿ ಫೋಟೊಗಳನ್ನು ಪ್ರಸಾರ ಮಾಡದಂತೆ ಮಾಧ್ಯಮಗಳಿಗೆ ರೋಹಿಣಿ ಸಿಂಧೂರಿ ಮನವಿ

ರೂಪಾ – ರೋಹಿಣಿಗೆ ಸಲಹೆ ನೀಡುವಂತೆ ಮೋದಿ, ಅಮಿತ್ ಶಾಗೆ ಮನವಿ ಮಾಡಿದ ಜಗ್ಗೇಶ್

ರೋಹಿಣಿ- ರೂಪಾ ಪ್ರಕರಣ | ಮುಖ್ಯ ಕಾರ್ಯದರ್ಶಿಗೆ ಅಗತ್ಯ ಸೂಚನೆ ನೀಡಿದ್ದೇನೆ: ಸಿಎಂ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.