ಗಂಗಾವತಿ (ಕೊಪ್ಪಳ ಜಿಲ್ಲೆ): ಗಂಗಾವತಿಯ ಮೈಬೂಬ್ ನಗರದ ನಿವಾಸಿ, ಬಾಳೆಹಣ್ಣಿನ ವ್ಯಾಪಾರಿ ಶಬ್ಬೀರ್ ಎಂಬಾತನನ್ನು ಶಿವಮೊಗ್ಗ ಪೊಲೀಸರು ಭಾನುವಾರ ತಡರಾತ್ರಿ ವಶಕ್ಕೆ ಪಡೆದಿದ್ದಾರೆ.

ಶಬ್ಬೀರ್, ನಿಷೇಧಿತ ಐಎಸ್ ಸಂಘಟನೆ ಜೊತೆ ನಂಟು ಹೊಂದಿದ ಆರೋಪದಲ್ಲಿ ಶಿವಮೊಗ್ಗದಲ್ಲಿ ಬಂಧನಕ್ಕೆ ಒಳಗಾಗಿರುವ ಯುವಕರ ಜೊತೆ ನಂಟು ಹೊಂದಿದ್ದ ಎನ್ನಲಾಗಿದೆ.

ಪೊಲೀಸರು ಶಬ್ಬೀರನನ್ನು ವಶಕ್ಕೆ ಪಡೆದು ರಾತ್ರಿಯೇ ಶಿವಮೊಗ್ಗಕ್ಕೆ ಕರೆದುಕೊಂಡು ಹೋಗಿದ್ದಾರೆ ಎಂದು ಪೊಲೀಸ್ ಮೂಲಗಳು ಖಚಿತಪಡಿಸಿವೆ. ತುಂಗೆ ದಡದಲ್ಲಿ ಬಾಂಬ್ ಸ್ಫೋಟ ಪ್ರಯೋಗ ನಡೆಸಿದ್ದ ಯುವಕರ ಮೊಬೈಲ್‌ನಲ್ಲಿ ಶಬ್ಬೀರ್ ಜೊತೆ ಮಾತನಾಡಿದ ಕರೆ ದಾಖಲೆಗಳು ಪತ್ತೆಯಾಗಿವೆ. ಹೆಚ್ಚಿನ ವಿಚಾರಣೆಗಾಗಿ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ವಶಕ್ಕೆ ಪಡೆದು ವಿಚಾರಣೆ ಮಾಡುತ್ತಿರುವ ವಿಷಯವನ್ನು ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಶು ಗಿರಿ ಪ್ರಜಾವಾಣಿಗೆ ಖಚಿತಪಡಿಸಿದ್ದಾರೆ. ಆದರೆ, ಶಿವಮೊಗ್ಗ ಪೊಲೀಸರು ವಶಕ್ಕೆ ಪಡೆದ ವಿಷಯವನ್ನು ನಿರಾಕರಿಸಿದ್ದಾರೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.