ಬೆಂಗಳೂರು: ಇಸ್ರೊದ ನಿವೃತ್ತ ವಿಜ್ಞಾನಿ, ಚಂದ್ರಯಾನ– 1ರ ಯೋಜನಾ ನಿರ್ದೇಶಕರಾಗಿದ್ದ ಶ್ರೀನಿವಾಸ ಹೆಗಡೆ (71) ಅನಾರೋಗ್ಯದಿಂದ ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ನಿಧನರಾದರು.

ಮೃತರಿಗೆ ಪತ್ನಿ ಮತ್ತು ಇಬ್ಬರು ಮಕ್ಕಳಿದ್ದಾರೆ. ಉಡುಪಿ ಜಿಲ್ಲೆ ಕಾರ್ಕಳ ಮೂಲದ ಹೆಗಡೆ ಅವರು 1978ರಲ್ಲಿ ಇಸ್ರೊವನ್ನು ಸೇರಿ 2014ರವರೆಗೆ ಸೇವೆ ಸಲ್ಲಿಸಿದರು. ಹಲವು ಬಾಹ್ಯಾಕಾಶ ಯೋಜನೆಗಳಲ್ಲಿ ಅವರು ಭಾಗಿಯಾಗಿದ್ದರು. ಯು.ಆರ್.ಉಪಗ್ರಹ ಕೇಂದ್ರದಲ್ಲಿ ತಮ್ಮ ವೃತ್ತಿ ಆರಂಭಿಸಿದರು. ಹಲವು ಸಂಪರ್ಕ ಉಪಗ್ರಹಗಳ ಉಡಾವಣೆಯಲ್ಲಿ ಕೆಲಸ ಮಾಡಿದ್ದರು.

ಮೂತ್ರಪಿಂಡ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಗುರುವಾರ ಹೃದಯಾಘಾತಕ್ಕೆ ಒಳಗಾದರು. ಅವರನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು. ಶುಕ್ರವಾರ ಮಧ್ಯಾಹ್ನ ಅವರು ಕೊನೆಯುಸಿರೆಳೆದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.