ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲ್ಲೂಕಿನಲ್ಲಿ ಮಸೀದಿ ಆವರಣಕ್ಕೆ ನುಗ್ಗಿ ಜೈ ಶ್ರೀರಾಮ್ ಘೋಷಣೆ ಕೂಗಿದ ಆರೋಪದಡಿ ಬಂಧನಕ್ಕೊಳಗಾಗಿದ್ದ ಇಬ್ಬರು ವ್ಯಕ್ತಿಗಳ ವಿರುದ್ಧದ ಕ್ರಿಮಿನಲ್ ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿದೆ.

ಈ ಸಂಬಂಧ ಪುತ್ತೂರಿನ ಬಿಳಿನೆಲೆಯ ಕೀರ್ತನ್ ಕುಮಾರ್ (28) ಮತ್ತು ಎನ್.ಎಂ.ಸಚಿನ್ ಕುಮಾರ್ (26) ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಕುರಿತಂತೆ ಆದೇಶಿಸಿದೆ.

‘ಹಿಂದೂ, ಮುಸಲ್ಮಾನರು ಸೌಹಾರ್ದತೆಯಿಂದ ಜೀವಿಸುತ್ತಿದ್ದೇವೆ ಎಂದು ಸ್ವತಃ ದೂರುದಾರರೇ ಹೇಳಿದ್ದಾರೆ. ಆದರೆ, ಅರ್ಜಿದಾರರ ವಿರುದ್ಧ ಭಾರತೀಯ ದಂಡ ಸಂಹಿತೆ–1860ರ (ಐಪಿಸಿ) ಕಲಂ 295ಎ (ಧಾರ್ಮಿಕ ಭಾವನೆ, ಧರ್ಮ ಅಥವಾ ಧಾರ್ಮಿಕ ನಂಬಿಕೆಗಳನ್ನು ಅವಮಾನಿಸುವುದು) ಅಡಿಯಲ್ಲಿ ದೂರು ದಾಖಲಿಸಲಾಗಿದೆ’ ಎಂದು ನ್ಯಾಯಪೀಠ ಹೇಳಿದೆ.

‘ಜೈ ಶ್ರೀರಾಮ್ ಎಂದು ಘೋಷಣೆ ಕೂಗುವುದು ಧಾರ್ಮಿಕ ಭಾವನೆಗೆ ಹೇಗೆ ಧಕ್ಕೆಯಾಗುತ್ತದೆ ಎಂಬುದು ಅರ್ಥವಾಗುತ್ತಿಲ್ಲ. ಈ ಪ್ರಕರಣದಲ್ಲಿ ಯಾವುದೇ ಅಪರಾಧ ಕಂಡು ಬರುತ್ತಿಲ್ಲ. ಹಾಗಾಗಿ, ಅರ್ಜಿದಾರರ ವಿರುದ್ಧ ವಿಚಾರಣೆಗೆ ಅನುಮತಿ ನೀಡುವುದು ಕಾನೂನು ಪ್ರಕ್ರಿಯೆಯ ದುರುಪಯೋಗವಾಗುತ್ತದೆ’ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.

ಪ್ರಕರಣವೇನು?: ‘ದಕ್ಷಿಣ ಕನ್ನಡ ಜಿಲ್ಲೆ ಕಡಬ ತಾಲ್ಲೂಕು ಐತ್ತೂರು ಗ್ರಾಮದ ಮರ್ಧಾಳದ ಬದ್ರಿಯಾ ಜುಮ್ಮಾ ಮಸೀದಿ ಆವರಣವನ್ನು ಸೆಪ್ಟೆಂಬರ್ 24ರಂದು ರಾತ್ರಿ 10.50ರಲ್ಲಿ ಅಕ್ರಮವಾಗಿ ಪ್ರವೇಶಿಸಿ ಜೈ ಶ್ರೀರಾಮ್ ಘೋಷಣೆ ಕೂಗಿದ್ದಾರೆ. ಬ್ಯಾರಿಗಳನ್ನು ಬದುಕಲು ಬಿಡುವುದಿಲ್ಲ ಎಂದು ಬೊಬ್ಬೆ ಹಾಕಿದ್ದಾರೆ‘ ಎಂದು ಆರೋಪಿಸಿ ಮಸೀದಿ ಸಿಬ್ಬಂದಿ ಕೀರ್ತನ್ ಕುಮಾರ್ ಮತ್ತು ಎನ್.ಎಂ.ಸಚಿನ್ ಕುಮಾರ್ ವಿರುದ್ಧ ಕಡಬ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ದೂರಿನನ್ವಯ ಆರೋಪಿಗಳಿಬ್ಬರ ವಿರುದ್ಧ ಐಪಿಸಿಯ ವಿವಿಧ ಕಲಂಗಳಡಿ ಪ್ರಕರಣ ದಾಖಲಿಸಿದ್ದರು.

‘ನಮ್ಮ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲ್ಲೂಕಿನ ಕಡಬ ಪೊಲೀಸ್ ಠಾಣೆಯಲ್ಲಿ ದಾಖಲಾದ ಎಫ್ಐಆರ್ ಹಾಗೂ ಪುತ್ತೂರಿನ 2ನೇ ಜೆಎಂಎಫ್ಸಿ ಕೋರ್ಟ್ನ ನ್ಯಾಯಿಕ ಪ್ರಕ್ರಿಯೆ ರದ್ದುಗೊಳಿಸಬೇಕು’ ಎಂದು ಅರ್ಜಿದಾರರು ಕೋರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.