ಬೆಂಗಳೂರು: ವಿಧಾನ ಪರಿಷತ್ತಿಗೆ ನೂತನವಾಗಿ ಆಯ್ಕೆಯಾದ ಜಗದೀಶ್ ಶೆಟ್ಟರ್, ಎನ್.ಎಸ್.ಬೋಸರಾಜ್, ತಿಪ್ಪಣಪ್ಪ ಕಮಕನೂರು ಅವರು ಸೋಮವಾರ ಪ್ರಮಾಣವಚನ ಸ್ವೀಕರಿಸಿದರು.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಜಗದೀಶ ಶೆಟ್ಟರ್ ಮತ್ತು ಎನ್.ಎಸ್.ಭೋಸರಾಜು ಅವರು ಭಗವಂತನ ಹೆಸರಿನಲ್ಲಿ ಹಾಗೂ ತಿಪ್ಪಣಪ್ಪ ಕಮಕನೂರು ಅವರು ಯಾನಾಗುಂದಿ ಮಾತಾ ಮಾಣಿಕೇಶ್ವರಿ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ಪ್ರಮಾಣ ವಚನಸ್ವೀಕರಿಸಿದ ನಂತರ ನೂತನ ಸದಸ್ಯರಿಗೆ ಸಭಾಪತಿ ಬಸವರಾಜ ಹೊರಟ್ಟಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೂಗುಚ್ಛ ನೀಡಿ ಅಭಿನಂದಿಸಿದರು.

ಸದನದ ನಿಯಮಾವಳಿಗಳನ್ನು ಒಳಗೊಂಡ ಕಿಟ್ ನೀಡಲಾಯಿತು.

ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವ ಡಾ.ಶರಣಪ್ರಕಾಶ ಪಾಟೀಲ್, ವಿಧಾನ ಪರಿಷತ್ ಕಾರ್ಯದರ್ಶಿ ಮಹಾಲಕ್ಷ್ಮಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.