ಬೆಂಗಳೂರು: ಹಿರಿಯ ಅಧಿಕಾರಿಗಳಿಗೆ ಸೆಲ್ಯೂಟ್ ಮಾಡುವ ಸಂದರ್ಭದ ಕೊನೆಯಲ್ಲಿ ‘ಜೈ ಹಿಂದ್’ ಹೇಳಬೇಕೆಂದು ಎಚ್‌ಎಎಲ್ ಠಾಣೆ ಇನ್‌ಸ್ಪೆಕ್ಟರ್, ತಮ್ಮ ಠಾಣೆ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಸೂಚನೆ ನೀಡಿದ್ದಾರೆ.

ಈ ಸಂಬಂಧ ಇನ್‌ಸ್ಪೆಕ್ಟರ್ ಎಸ್.ವೈ.ಮೋಹನ್ ಅವರು ಜೂನ್ 5ರಂದು ಜ್ಞಾಪನಾ ಪತ್ರ ಹೊರಡಿಸಿದ್ದಾರೆ. ಠಾಣೆಯ ಎಲ್ಲ ಅಧಿಕಾರಿ ಹಾಗೂ ಸಿಬ್ಬಂದಿ ಸೂಚನೆಯನ್ನು ಪಾಲಿಸುವಂತೆ ಹೇಳಿದ್ದಾರೆ. ಈ ಪತ್ರ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಪರ–ವಿರೋಧ ಚರ್ಚೆ ಆರಂಭವಾಗಿದೆ.

‘ಹಿರಿಯ ಅಧಿಕಾರಿಗಳಿಗೆ ಸೆಲ್ಯೂಟ್ ಮಾಡಿ ರಾಷ್ಟ್ರೀಯ ಭಾವನೆ ಅಂಗವಾಗಿ ಜೈ ಹಿಂದ್ ಹೇಳುವ ಹೊಸ ಪದ್ಧತಿಯನ್ನು ರೂಢಿಸಿಕೊಳ್ಳಲು ಈ ಮೂಲಕ ಸೂಚಿಸಲಾಗಿದೆ. ನಿಮ್ಮಿಂದ (ಠಾಣೆ ಅಧಿಕಾರಿ ಹಾಗೂ ಸಿಬ್ಬಂದಿ) ಮೇಲಿನ ರ‍್ಯಾಂಕ್ ಅಧಿಕಾರಿಗಳಿಗೆ ಸೆಲ್ಯೂಟ್ ಮಾಡಿದ ನಂತರ ಜೈ ಹಿಂದ್ ಹೇಳಲು ಸೂಚಿಸಲಾಗಿದೆ’ ಎಂದು ಪತ್ರದಲ್ಲಿ ಇನ್‌ಸ್ಪೆಕ್ಟರ್ ಹೇಳಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಇನ್‌ಸ್ಪೆಕ್ಟರ್ ಮೋಹನ್, ‘ಸೇನೆಯಲ್ಲಿ ಹಿರಿಯ ಅಧಿಕಾರಿಗಳಿಗೆ ಸೆಲ್ಯೂಟ್ ಮಾಡಿದ ನಂತರ ಜೈ ಹಿಂದ್ ಹೇಳುವ ಪದ್ಧತಿ ಇದೆ. ಇದರಿಂದ ರಾಷ್ಟ್ರದ ಮೇಲಿನ ಪ್ರೀತಿ ಹಾಗೂ ರಾಷ್ಟ್ರೀಯ ಭಾವನೆ ಹೆಚ್ಚಾಗುತ್ತದೆ. ಹೀಗಾಗಿ, ನಮ್ಮ ಠಾಣೆ ಸಿಬ್ಬಂದಿಗೂ ಜೈ ಹಿಂದ್ ಹೇಳುವುದನ್ನು ರೂಢಿಸಿಕೊಳ್ಳುವಂತೆ ತಿಳಿಸಿದ್ದೇನೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.