ಚಿತ್ರದುರ್ಗ: ಪ್ರಧಾನಿ ನರೇಂದ್ರ ಮೋದಿ ಅವರ ಪತ್ನಿ ಜಶೋದಾ ಬೆನ್ ಅವರು ಬುಧವಾರ ಚಿತ್ರದುರ್ಗಕ್ಕೆ ಭೇಟಿ ನೀಡಿ, ನೀಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪೂಜೆ ಸಲ್ಲಿಸಿದರು.

ಬೆಂಗಳೂರಿನಿಂದ ಶಿವಮೊಗ್ಗ ಜಿಲ್ಲೆಯ ರಾಮಚಂದ್ರಾಪುರ ಮಠಕ್ಕೆ ತೆರಳುತ್ತಿದ್ದ ಅವರು ಮಾರ್ಗ ಮಧ್ಯೆ ಚಿತ್ರದುರ್ಗದಲ್ಲಿ ಕೆಲಕಾಲ ವಿಶ್ರಾಂತಿ ಪಡೆದರು.

ಜಶೋದಾ ಅವರು ನಿತ್ಯ ಬೆಳಿಗ್ಗೆ ಶಿವನ ದರ್ಶನ ಪಡೆಯದೇ ನೀರು ಸಹ ಕುಡಿಯುವುದಿಲ್ಲ ಎನ್ನಲಾಗಿದೆ. ಹೀಗಾಗಿ ಶಿವನ ದೇಗುಲ ಹುಡುಕಿ ಅವರು ನೀಲಕಂಠೇಶ್ವರಸ್ವಾಮಿ ದೇಗುಲಕ್ಕೆ ಬಂದಿದ್ದರು. ಸ್ವಾಮಿಯ ದರ್ಶನ ಪಡೆದು ಪೂಜೆ ಸಲ್ಲಿಸಿದರು. ಸುಮಾರು 20 ನಿಮಿಷ ದೇಗುಲದಲ್ಲಿದ್ದರು.

ಪ್ರವಾಸಿ ಮಂದಿರದಲ್ಲಿ ಅವರಿಗೆ ಬೆಳಗಿನ ಉಪಾಹಾರ ವ್ಯವಸ್ಥೆ ಮಾಡಲಾಗಿತ್ತು. ಉಪಾಹಾರ ಸೇವನೆಗೂ ಮುನ್ನ ಅಶ್ವತ್ಥವೃಕ್ಷಕ್ಕೆ ಪೂಜೆ ಸಲ್ಲಿಸುವ ಇಚ್ಛೆ ವ್ಯಕ್ತಪಡಿಸಿದರು. ಆದರೆ, ಅಶ್ವತ್ಥಕಟ್ಟೆ ಸಿಗದೇ, ಅತ್ತಿ ಮರ ಸುತ್ತಿ ಭಕ್ತಿ ಸಮರ್ಪಿಸಿದರು. ಬಳಿಕ ಆಹಾರ ಸೇವನೆ ಮಾಡಿದರು.

ಬೆಂಗಳೂರಿಗೆ ಮಂಗಳವಾರ ಬಂದಿದ್ದ ಜಶೋದಾ ಅವರು ಬುಧವಾರ ಬೆಳಿಗ್ಗೆ ತುಮಕೂರು ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಬೇಕಿತ್ತು. ಆದರೆ, ಸ್ವಾಮೀಜಿ ಮಠದಲ್ಲಿ ಇರದೇ ಇರುವ ಹಿನ್ನೆಲೆಯಲ್ಲಿ ಚಿತ್ರದುರ್ಗಕ್ಕೆ ಬಂದರು. ರಾಮಚಂದ್ರಾಪುರ ಮಠಕ್ಕೆ ಭೇಟಿ ನೀಡಿ ಶೃಂಗೇರಿಗೆ ತೆರಳುವರು ಎಂದು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.