ಬೆಂಗಳೂರು: ಪೆನ್ಡ್ರೈವ್ ಹಂಚಿಕೆ ಪ್ರಕರಣದಲ್ಲಿ ಜೆಡಿಎಸ್ ಶಾಸಕ ಎ. ಮಂಜು ಮತ್ತಿತರರ ಹೆಸರು ಕೇಳಿ ಬಂದಿದ್ದು, ಸರಿಯಾದ ತನಿಖೆ ನಡೆದರೆ ಸತ್ಯ ಹೊರಗೆ ಬರುತ್ತದೆ ಎಂದು ಜೆಡಿಎಸ್ ಪ್ರಮುಖರ ಸಮಿತಿ ಅಧ್ಯಕ್ಷ ಜಿ.ಟಿ. ದೇವೇಗೌಡ ಹೇಳಿದರು.

ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಸೋಮವಾರ ಭೇಟಿ, ಪಕ್ಷದ ಶಾಸಕ ಎಚ್.ಡಿ. ರೇವಣ್ಣ ಅವರ ಆರೋಗ್ಯ ವಿಚಾರಿಸಿ ಹೊರಬಂದ ನಂತರ ಸುದ್ದಿಗಾರರ ಪ್ರಶ್ನೆಗಳಿಗೆ ಅವರು ಉತ್ತರಿಸಿದರು.

‘ಎ. ಮಂಜು ಅವರಿಗೆ ಪೆನ್ಡ್ರೈವ್ ಕೊಟ್ಟಿದ್ದೆ ಎಂದು ಯಾರೋ ಒಬ್ಬರು ಫೇಸ್ಬುಕ್ನಲ್ಲಿ ಬರೆದುಕೊಂಡಿದ್ದಾರೆ. ಎಸ್ಐಟಿ ತನಿಖೆ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಬೆನ್ನು ತಟ್ಟಿಕೊಂಡಿದ್ದಾರೆ. ಸರಿಯಾದ ತನಿಖೆ ನಡೆಸುವ ಬಗ್ಗೆ ನಮಗೂ ವಿಶ್ವಾಸವಿದೆ. ನಂತರ ಎಲ್ಲ ತಿಳಿಯಲಿದೆ’ ಎಂದರು.

‘ಅಪಹರಣ ಪ್ರಕರಣದ ಸಂತ್ರಸ್ತೆ ಹುಣಸೂರಿನ ಮನೆಯಲ್ಲೇ ಇದ್ದರು. ಅಲ್ಲಿಂದಲೇ ಪೊಲೀಸರು ಕರೆದುಕೊಂಡು ಹೋದರು ಎಂದು ಅವರ ಮಗಳು–ಅಳಿಯ ಹೇಳಿದ್ದಾರೆ. ಸಂತ್ರಸ್ತೆಯ ಹೇಳಿಕೆಯೂ ಹರಿದಾಡುತ್ತಿದೆ. ಮುಂದೆ ಏನಾಗುತ್ತದೆಯೋ ನೋಡೋಣ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.