ಬೆಂಗಳೂರು: ಜಾರ್ಖಂಡ್‌ನ ಜೈನ ಸಮುದಾಯದ ಪವಿತ್ರ ಕ್ಷೇತ್ರ ಸಮ್ಮೇದ ಶಿಖರ್ಜಿಯನ್ನು ಪ್ರವಾಸಿ ತಾಣವೆಂದು ಘೋಷಿಸಿರುವ ಸರ್ಕಾರದ ನಡೆ ಖಂಡಿಸಿ ಕರ್ನಾಟಕ ಜೈನ್ ಅಸೋಸಿಯೇಷನ್ ನೇತೃತ್ವದಲ್ಲಿ ಜೈನ ಸಮುದಾಯದವರು ಬುಧವಾರ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆನಡೆಸಿದರು.

‘ಪವಿತ್ರ ಕ್ಷೇತ್ರವನ್ನು ಉಳಿಸಬೇಕು. ಪ್ರವಾಸಿ ತಾಣ ರದ್ದುಗೊಳಿಸಬೇಕು’ ಎಂದು ಆಗ್ರಹಿಸಿದರು.

ಸಮ್ಮೇದ ಶಿಖರ್ಜಿ ಜೈನರ ಪವಿತ್ರ ಕ್ಷೇತ್ರ. ಈ ಕ್ಷೇತ್ರದ ದರ್ಶನ ಮಾಡಿದರೆ ಸಕಲ ಪಾಪಗಳೂ ನಾಶವಾಗುತ್ತವೆ ಎಂಬ ನಂಬಿಕೆಯಿದೆ. ಕೇಂದ್ರ ಹಾಗೂ ಜಾರ್ಖಂಡ್ ಸರ್ಕಾರಗಳು ಇದನ್ನು ಪ್ರವಾಸಿ ತಾಣವೆಂದು ಘೋಷಣೆ ಮಾಡಿದ್ದು ಜೈನ ಸಮುದಾಯಕ್ಕೆ ನೋವು ತಂದಿದೆ. ಈ ನಿರ್ಧಾರ ಹಿಂದಕ್ಕೆ ಪಡೆಯಬೇಕು ಎಂದು ಪ್ರತಿಭಟನಕಾರರು ಕೋರಿದರು.

ಸರ್ಕಾರದ ನಿರ್ಧಾರದಿಂದ ಜೈನ್ ಸಮುದಾಯದ ಭಾವನೆಗಳಿಗೆ ಧಕ್ಕೆಯಾಗಿದೆ ಎಂದು ಹೇಳಿದರು.

ಕರ್ನಾಟಕ ಜೈನ್ ಭವನದಿಂದ ಅವೆನ್ಯೂ ರಸ್ತೆಯ ಮೂಲಕ ಚಿಕ್ಕಪೇಟೆ ಬಸದಿ ಮಾರ್ಗವಾಗಿ ಮೆರವಣಿಗೆ ಸ್ವಾತಂತ್ರ್ಯ ಉದ್ಯಾನಕ್ಕೆ ಬಂದು ತಲುಪಿತು. ಅಲ್ಲಿ ಮೌನ ಪ್ರತಿಭಟನೆ ನಡೆಸಲಾಯಿತು. ಜೈನ ಮುನಿಗಳು, ಜೈನ ಸಂಘದ ಪದಾಧಿಕಾರಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.