ಬೆಂಗಳೂರು: ಕಾಂಗ್ರೆಸ್ ಸರ್ಕಾರದಲ್ಲಿ ಮತಾಂಧ ಶಕ್ತಿಗಳು ಮತ್ತೊಮ್ಮೆ ಅಟ್ಟಹಾಸ ಮೆರೆದಿದ್ದು, ಸರ್ವ ಜನಾಂಗದ ಶಾಂತಿಯ ತೋಟವಾಗಿದ್ದ ಕರ್ನಾಟಕದಲ್ಲಿ ಜಿಹಾದಿ ಮುಳ್ಳುಗಳ ದುಸ್ಸಾಹಸ ಶಾಂತಿ ಕದಡುತ್ತಿದೆ ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಆರ್.ಅಶೋಕ ಹೇಳಿದ್ದಾರೆ.
.ನಾಗಮಂಗಲ ಗಲಭೆ | ಪ್ರೀತಿಯ ಅಂಗಡಿಯಲ್ಲಿ ಕೇವಲ ಹಿಂದೂ ದ್ವೇಷದ ಮಾರಾಟ: BJP ಟೀಕೆ .
‘ಎಕ್ಸ್’ ಮೂಲಕ ಪ್ರತಿಕ್ರಿಯಿಸಿರುವ ಅವರು, ಬುಧವಾರ ರಾತ್ರಿ ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದಿರುವ ಘಟನೆ ಖಂಡನೀಯ. ಕಾಂಗ್ರೆಸ್ ಆಡಳಿತದಲ್ಲಿ ರಾಜ್ಯದಲ್ಲಿ ಕಣ್ಮರೆಯಾಗಿರುವ ಕಾನೂನು ಸುವ್ಯವಸ್ಥೆಗೆ ಮತ್ತೊಂದು ನಿದರ್ಶನವಾಗಿದೆ ಎಂದು ಹೇಳಿದರು.

ಕಳೆದ ವರ್ಷವೂ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ಸಂದರ್ಭದಲ್ಲಿ ಇಂತಹುದೇ ಘಟನೆ ನಡೆದಿದ್ದರೂ ಈ ವರ್ಷ ಪೊಲೀಸರು ಯಾವುದೇ ಮುಂಜಾಗ್ರತಾ ಕ್ರಮ ಕೈಗೊಂಡಿಲ್ಲ. ಕಾಂಗ್ರೆಸ್ ಸರ್ಕಾರ ಕಾನೂನು ಸುವ್ಯವಸ್ಥೆ ಕಾಪಾಡುವುದರಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ದೂರಿದರು.
.ಮಂಡ್ಯದ ನಾಗಮಂಗಲ ಪಟ್ಟಣದಲ್ಲಿ ಕಲ್ಲು ತೂರಾಟ; 52 ಜನರ ಬಂಧನ: ಜಿ. ಪರಮೇಶ್ವರ.
ಶಾಂತಿಯುತವಾಗಿ ಸಾಗುತ್ತಿದ್ದ ಗಣೆಶ ವಿಸರ್ಜನೆ ಮೆರವಣಿಗೆಗೆ ಅಡ್ಡಿಪಡಿಸುವ ದುರದ್ದೇಶದಿಂದ ಮುಸ್ಲಿಂ ಮತಾಂಧ ಪುಂಡರು ಪೂರ್ವ ನಿಯೋಜಿತವಾಗಿ ದಾಂಧಲೆ ಎಬ್ಬಿಸಿ ಸಾರ್ವಜನಿಕರು,ಪೊಲೀಸರ ಮೇಲೆ ಕಲ್ಲು ತೂರಾಟ ಮಾಡಿ ಚಪ್ಪಲಿ ಎಸೆದಿದ್ದಾರೆ. ಪೆಟ್ರೋಲ್ ಬಾಂಬ್ ಸ್ಫೋಟಿಸುವುದು, ತಲ್ವಾರ್ ಝಳಪಿಸುವ ದುಸ್ಸಾಹಸಕ್ಕೆ ಮುಂದಾಗುತ್ತಾರೆ ಎಂದರೆ, ರಾಜ್ಯದಲ್ಲಿ ಇಂತಹ ಮತಾಂಧ ಪುಂಡರಿಗೆ ಕಾನೂನಿನ ಭಯವೇ ಇಲ್ಲವೆಂಬುದು ಸ್ಪಷ್ಟವಾಗುತ್ತದೆ ಎಂದರು.

ರಕ್ಷಣೆ ಕೊಡಿ ಎಂದು ಪೊಲೀಸ್ ಠಾಣೆಗೆ ಬಂದವರ ಮೇಲೆಯೇ ಈ ಮತಾಂಧ ಪುಂಡರು ಹಲ್ಲೆ, ದಬ್ಬಾಳಿಕೆ ನಡೆಸುತ್ತಾರೆ ಎಂದರೆ ಈ ದುಷ್ಟರ ತಾಲಿಬಾನ್ ಮನಸ್ಥಿತಿಗೆ ಕಾಂಗ್ರೆಸ್ ಸರ್ಕಾರದಲ್ಲಿ ಎಷ್ಟರ ಮಟ್ಟಿಗೆ ಪ್ರೋತ್ಸಾಹ, ಪೋಷಣೆ ದೊರಕುತ್ತಿದೆ ಎಂಬುದನ್ನು ಊಹಿಸಬಹುದು ಎಂದರು.
.ನಾಗಮಂಗಲ ಗಲಭೆ | ಹಿಂದೂ ಸಮುದಾಯವನ್ನು ಪ್ರಚೋದಿಸುವ ಕುಕೃತ್ಯ: ಬಿ.ವೈ.ವಿಜಯೇಂದ್ರ .
ಈ ಮತಾಂಧ ಪುಂಡರ ಬಾಲ ಕತ್ತರಿಸದೇ ಹೀಗೆ ಬಿಟ್ಟರೆ ಇಂತಹವರು ನಾಳೆ ಉಗ್ರಗಾಮಿಗಳಾಗುವುದರಲ್ಲಿ ಸಂಶಯವೇ ಇಲ್ಲ. ನಿನ್ನೆಯ ಗಲಭೆಗೆ ಕಾರಣದಾರ ಸಮಾಜಘಾತುಕ ಶಕ್ತಿಗಳನ್ನು ಬಂಧಿಸಿ ಕಾನೂನು ವಶಕ್ಕೆ ಒಪ್ಪಿಸಿ ಸರ್ವ ಜನಾಂಗದ ಶಾಂತಿಯ ತೋಟವಾದ ಕರ್ನಾಟಕದಲ್ಲಿ ಜಿಹಾದಿ ಮಾನಸಿಕತೆಗೆ ಜಾಗ ಇಲ್ಲ ಎಂಬ ದಿಟ್ಟ ಸಂದೇಶ ರವಾನಿಸಬೇಕು ಎಂದು ಅವರು ಹೇಳಿದ್ದಾರೆ.
.ಮಂಡ್ಯ | ನಾಗಮಂಗಲ ಗಲಭೆ ಪ್ರಕರಣ: 54 ಆರೋಪಿಗಳ ಬಂಧನ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.