ಬೆಂಗಳೂರು: ಜಿಂದಾಲ್ ಸ್ಟೀಲ್ ಕಂಪನಿಗೆ ಅತ್ಯಂತ ಕನಿಷ್ಠ ದರದಲ್ಲಿ 3,667 ಎಕರೆ ಭೂಮಿ ಮಾರಾಟ ಮಾಡುವ ಸಚಿವ ಸಂಪುಟ ಸಭೆಯ ನಿರ್ಣಯಕ್ಕೆ ತಡೆ ನೀಡಬೇಕು ಎಂದು ಸಾಮಾಜಿಕ ಕಾರ್ಯಕರ್ತ ಕೆ.ಎ.ಪೌಲ್, ರಾಜ್ಯಪಾಲರಿಗೆ ಮನವಿ ಮಾಡಿದ್ದಾರೆ.

ಪ್ರತಿ ಎಕರೆಗೆ ₹1,22,200 ರಂತೆ ಜಮೀನಿಗೆ ಕ್ರಯಪತ್ರ ಮಾಡಿಕೊಡಲು ಸಂಪುಟ ಒಪ್ಪಿಗೆ ನೀಡಿದೆ. ಇದರಿಂದ ಸರ್ಕಾರದ ಬೊಕ್ಕಸಕ್ಕೆ ದೊಡ್ಡ ಪ್ರಮಾಣದಲ್ಲಿ ನಷ್ಟ ಆಗಲಿದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

‘ಸಂಪುಟದ ನಿರ್ಣಯಕ್ಕೆ ತಡೆ ನೀಡಬೇಕು ಎಂದು ಮುಖ್ಯಮಂತ್ರಿಯವರಿಗೂ ಈಗಾಗಲೇ ಮನವಿ ಪತ್ರ ಸಲ್ಲಿಸಿದ್ದೇನೆ. ಇಡೀ ಪ್ರಕರಣದ ಬಗ್ಗೆ ಹೈಕೋರ್ಟ್ ನ್ಯಾಯಾಧೀಶರಿಂದ ನ್ಯಾಯಾಂಗ ತನಿಖೆಗೆ ಆದೇಶ ನೀಡಬೇಕು’ ಎಂದು ಅವರು ಒತ್ತಾಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.