ಬೆಂಗಳೂರು: ಪತ್ರಕರ್ತ, ಸಂಯುಕ್ತ ಕರ್ನಾಟಕದ ಸಂಪಾದಕ ವಸಂತ ನಾಡಿಗೇರ(59) ಅವರು ಸೋಮವಾರ ಮುಂಜಾನೆ ಹೃದಯಾಘಾತದಿಂದ ನಿಧನರಾದರು.

ಮೃತರಿಗೆ ತಾಯಿ, ಪತ್ನಿ, ಪುತ್ರ, ಪುತ್ರಿ ಇದ್ದಾರೆ. ಮಧ್ಯಾಹ್ನ 2 ಗಂಟೆಗೆ ಚಾಮರಾಜಪೇಟೆಯ ಚಿತಾಗಾರದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಹಾವೇರಿ ಜಿಲ್ಲೆಯ ರಾಣಿಬೆನ್ನೂರಿನ ವಸಂತ ನಾಡಿಗೇರ್ ಅವರು ಸಂಯುಕ್ತ ಕರ್ನಾಟಕದಿಂದ ವೃತ್ತಿ ಬದುಕು ಆರಂಭಿಸಿ, ವಿಜಯ ಕರ್ನಾಟಕ, ಕನ್ನಡಪ್ರಭ, ವಿಶ್ವವಾಣಿ ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸಿದ್ದರು.

ಲತಾ ಮಂಗೇಶಕರ್ ಜೀವನ ಚರಿತ್ರೆಯನ್ನು ಕನ್ನಡದಲ್ಲಿ ಬರೆದಿದ್ದಾರೆ.

ವಸಂತ ನಾಡಿಗೇರ ಅವರು ಕರ್ನಾಟಕ ಮಾಧ್ಯಮ ಅಕಾಡೆಮಿ, ಖಾದ್ರಿ ಶಾಮಣ್ಣ ಪ್ರಶಸ್ತಿಗಳಿಗೆ ಭಾಜನರಾಗಿದ್ದರು.

ವೃತ್ತಿ ಜೀವನದ ಹಿರಿತನದ ಸೇವೆ ಗುರುತಿಸಿ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ಕೆಯುಡಬ್ಲೂಜೆ ದತ್ತಿನಿಧಿ ಪ್ರಶಸ್ತಿ ನೀಡಿ ಗೌರವಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.