ಅಥಣಿ: ನವಜಾತ ಹೆಣ್ಣು ಶಿಶುವನ್ನು ತಾಲ್ಲೂಕಿನ ಯಕ್ಕಂಚಿ ಗ್ರಾಮದ ಪ್ರಾಥಮಿಕ ಸರ್ಕಾರಿ ಶಾಲೆಯ ಶೌಚಾಲಯದಲ್ಲಿ ಇಟ್ಟು ಹೋಗಿರುವ ಘಟನೆ ಶನಿವಾರ ನಡೆದಿದೆ.

ಶನಿವಾರ ಮಧ್ಯಾಹ್ನದ ನಂತರ ಶಾಲೆಗೆ ರಜೆ ಇತ್ತು. ಈ ಸಮಯ ನೋಡಿಕೊಂಡು ಮಗು ಇಟ್ಟು ಹೋಗಿದ್ದಾರೆ ಎಂದು ತಿಳಿದುಬಂದಿದೆ.

ಮಗು ಅಳುತ್ತಿದ್ದುದ್ದನ್ನು ಗಮನಿಸಿದ ಗ್ರಾಮಸ್ಥರು ಹಾಗೂ ಅಂಗನವಾಡಿ ಸಿಬ್ಬಂದಿ ಸ್ಥಳಕ್ಕೆ ಹೋಗಿ ನೋಡಿದ್ದಾರೆ. ಮಗುವನ್ನು ರಕ್ಷಣೆ ಮಾಡಿ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದರು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಬೆಳಗಾವಿ ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ.

ಸ್ಥಳಕ್ಕೆ ಐಗಳಿ ಠಾಣೆ ಪೊಲೀಸರು ಮತ್ತು ಅಥಣಿ ಸಿಡಿಪಿಒ ಎ.ಬಿ. ಕಾಂಬಳೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.