ಬೆಂಗಳೂರು: ‘ಬಾಲ ನ್ಯಾಯ ಕಾಯ್ದೆ’ ವ್ಯಾಪ್ತಿಗೆ ಒಳಪಡುವ ಕಾನೂನು ಜೊತೆ ಸಂಘರ್ಷಕ್ಕೆ ಒಳಗಾದ ಮಕ್ಕಳ ಪ್ರಕರಣಗಳ ನಿರ್ವಹಣೆಗೆ ಹೈಕೋರ್ಟ್‌ನ ಹಾಲಿ ನ್ಯಾಯಮೂರ್ತಿಗಳ ಅಧ್ಯಕ್ಷತೆಯಲ್ಲಿ ರಚಿಸಲಾಗಿರುವ ‘ಬಾಲ ನ್ಯಾಯ ಮಂಡಳಿ’ಗೆ (ಜೆಜೆಬಿ) ಅಗತ್ಯ ಸಿಬ್ಬಂದಿ ಒದಗಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಾಲ್ಕು ವಾರಗಳ ಗಡುವು ನೀಡಿದೆ.

ರಾಜ್ಯದಲ್ಲಿ ಬಾಲ ನ್ಯಾಯ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ತರುವುದಕ್ಕಾಗಿ ಹೈಕೋರ್ಟ್ ಸ್ವಯಂ ಪ್ರೇರಿತವಾಗಿ ದಾಖಲಿಸಿಕೊಂಡಿರುವ ಹಾಗೂ ‘ಬಚಪನ್ ಬಚಾವೊ ಆಂದೋಲನ್’ ಸ್ವಯಂಸೇವಾ ಸಂಸ್ಥೆ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ವಿಭಾಗೀಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಕಾನೂನು ಸೇವಾ ಪ್ರಾಧಿಕಾರದ ಪರ ವಕೀಲೆ ಮೈತ್ರೇಯಿ ಕೃಷ್ಣನ್, ‘ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಹೈಕೋರ್ಟ್‌ನ ಹಾಲಿ ನಾಲ್ವರು ನ್ಯಾಯಮೂರ್ತಿಗಳನ್ನು ಒಳಗೊಂಡ ಬಾಲ ನ್ಯಾಯ ಮಂಡಳಿಯನ್ನು ರಚಿಸಲಾಗಿದೆ. ಈ ಮಂಡಳಿಗೆ ಪ್ರತ್ಯೇಕ ಸಚಿವಾಲಯ (ಅಧಿಕಾರಿ ಮತ್ತು ಸಿಬ್ಬಂದಿ) ಸ್ಥಾಪಿಸಬೇಕು ಎಂದು 2019ರಲ್ಲೇ ಹೈಕೋರ್ಟ್ ಆದೇಶಿಸಿದೆ. ಮಂಡಳಿಗೆ ಅಗತ್ಯವಿರುವ ಹುದ್ದೆಗಳನ್ನು ರಾಜ್ಯ ಸರ್ಕಾರ ಅನುಮೋದಿಸಬೇಕು. ಅವುಗಳನ್ನು ಹೈಕೋರ್ಟ್ ಮೂಲಕ ಭರ್ತಿ ಮಾಡಿಕೊಳ್ಳಬೇಕು. ಈವರೆಗೆ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಇದರಿಂದ ಮಂಡಳಿಯು ಪರಿಣಾಮಕಾರಿಯಾಗಿ ಕೆಲಸ ಮಾಡಲು ಆಗುತ್ತಿಲ್ಲ’ ಎಂದು ನ್ಯಾಯಪೀಠಕ್ಕೆ ವಿವರಿಸಿದರು.

ಇದಕ್ಕೆ ಸರ್ಕಾರದ ಪರ ವಕೀಲರು ಪ್ರತಿಕ್ರಿಯಿಸಿ, ‘ಈ ಕುರಿತು ಕ್ರಮ ಕೈಗೊಳ್ಳಲು ನಾಲ್ಕು ವಾರಗಳ ಕಾಲಾವಕಾಶ ಬೇಕು’ ಎಂದು ಕೋರಿದರು. ನ್ಯಾಯಪೀಠ ವಿಚಾರಣೆಯನ್ನು ಜೂನ್ 13ಕ್ಕೆ ಮುಂದೂಡಿದೆ.

ಹೈಕೋರ್ಟ್ ಬಾಲ ನ್ಯಾಯ ಮಂಡಳಿಗೆ ನ್ಯಾಯಮೂರ್ತಿಗಳಾದ ಕೆ.ಎಸ್.ಮುದಗಲ್ ಅಧ್ಯಕ್ಷರಾಗಿದ್ದು, ಎಸ್.ಸುನೀಲ್ ದತ್ ಯಾದವ್, ಎಂ.ಜಿ.ಉಮಾ, ಜೆ.ಎಂ.ಖಾಜಿ ಸದಸ್ಯರಾಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.