ಬೆಂಗಳೂರು: ‘ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆಸೆಟ್)-2023 ಪರೀಕ್ಷೆಯಲ್ಲಿ ಅರ್ಹತೆ ಪಡೆದು, ಇದುವರೆಗೂ ಮೂಲ ದಾಖಲಾತಿ ಪರಿಶೀಲನೆಗೆ ಹಾಜರಾಗದವರು ಇದೇ 12ರಂದು ಬೆಳಿಗ್ಗೆ 10 ಗಂಟೆಗೆ ಕಚೇರಿಗೆ ಬಂದು ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು’ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ತಿಳಿಸಿದ್ದಾರೆ.

ಹಲವು ಬಾರಿ ಮೂಲ ದಾಖಲೆಗಳ ಪರಿಶೀಲನೆ ಮಾಡಿದ್ದರೂ ಇನ್ನೂ 228 ಮಂದಿ ದಾಖಲೆ ಪರಿಶೀಲನೆಗೆ ಬಂದಿಲ್ಲ. ಹೀಗಾಗಿ ಅಭ್ಯರ್ಥಿಗಳ ಕೋರಿಕೆ ಮೇರೆಗೆ ಮತ್ತೊಂದು ಅವಕಾಶ ನೀಡಲಾಗಿದೆ. ಇನ್ನು ಮುಂದೆ ದಾಖಲೆ ಪರಿಶೀಲನೆ ಇರುವುದಿಲ್ಲ. ಹಾಗೆಯೇ ದಾಖಲೆ ಪರಿಶೀಲನೆಗೆ ಹಾಜರಾಗದೆ ಇರುವ ಅಭ್ಯರ್ಥಿಗಳನ್ನು ಅರ್ಹತಾ ಪಟ್ಟಿಯಿಂದ ಕೈಬಿಡಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ದಾಖಲಾತಿ ಪರಿಶೀಲನೆ ಪೂರ್ಣಗೊಂಡು, ಕೆಸೆಟ್ ಪ್ರಮಾಣಪತ್ರ ಪಡೆಯದಿರುವ ಅಭ್ಯರ್ಥಿಗಳು ಕೂಡ ನ. 12ರಂದು ಹಾಜರಾಗಬಹುದು ಎಂದೂ ಅವರು ವಿವರಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.