ಬೆಂಗಳೂರು: ‘ಸಂಸದ ಡಾ.ಕೆ.ಸುಧಾಕರ್ ಅವರು ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿ ನೋಡಿಕೊಳ್ಳುತ್ತಿದ್ದು, ತಮ್ಮ ಬಗ್ಗೆ ತಾವೇ ಆರೋಪ ಮಾಡಿಕೊಳ್ಳುತ್ತಿದ್ದಾರೆ’ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಹೇಳಿದ್ದಾರೆ.

‘ಕೋವಿಡ್ ಅಕ್ರಮಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಡಿ.ಕುನ್ಹಾ ಅವರ ವರದಿಯಲ್ಲಿ ಏನಿದೆ ಎಂಬುದು ನಮಗೇ ತಿಳಿದಿಲ್ಲ. ವರದಿಯಲ್ಲಿರುವ ಅಂಶಗಳನ್ನು ಆಧರಿಸಿ ಮುಂದಿನ ಕ್ರಮ ಆಗಲಿದೆ’ ಎಂದು ಅವರು ಸುದ್ದಿಗಾರರ ಜತೆ ಮಾತನಾಡಿ ತಿಳಿಸಿದರು.

‘ಸುಧಾಕರ್ ಅವರಿಗೆ ತಾವು ಮಾಡಿದ ತಪ್ಪುಗಳ ಪಾಪಪ್ರಜ್ಞೆ ಕಾಡುತ್ತಿರಬಹುದು. ವರದಿಯಲ್ಲಿ ಇಂಥವರ ಹೆಸರು ಇದೆ ಎಂದು ನಾವು ಹೇಳಿಲ್ಲ. ಬೀದಿಯಲ್ಲಿ ನಿಂತು ಕೆಲಸ ಮಾಡಿದ್ದೇನೆ ಎಂದು ಅವರೇ ಹೇಳಿಕೊಳ್ಳುತ್ತಿದ್ದಾರೆ. ಮಂತ್ರಿಯನ್ನಾಗಿ ಮಾಡುವುದೇ ಕೆಲಸ ಮಾಡಲಿಕ್ಕಾಗಿ. ಹೀಗಾಗಿ ಕೆಲಸ ಮಾಡುವುದು ಮಂತ್ರಿಗಳ ಕರ್ತವ್ಯ. ಅದನ್ನು ನಾವು ಹೇಳಿಕೊಳ್ಳುವುದಿಲ್ಲ. ಜನರು ನಮ್ಮ ಕೆಲಸದ ಬಗ್ಗೆ ಮಾತನಾಡಬೇಕು’ ಎಂದು ದಿನೇಶ್ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.