ಭಾನುವಾರ, 8 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಸಂಸದ ‌ಡಾ.‌ಕೆ.ಸುಧಾಕರ್ ಪ್ರಕರಣ: ವಿಚಾರಣೆಯಿಂದ ನ್ಯಾ.ದೀಕ್ಷಿತ್ ಹಿಂದಕ್ಕೆ

Published 26 ಜುಲೈ 2024, 15:50 IST
Last Updated 26 ಜುಲೈ 2024, 15:50 IST
ಅಕ್ಷರ ಗಾತ್ರ

ಬೆಂಗಳೂರು: ‘ಲೋಕಸಭೆ ಚುನಾವಣೆ ವೇಳೆ ಚುನಾವಣಾ ನೀತಿ ಸಂಹಿತೆ ಜಾರಿ ಅಧಿಕಾರಿಗಳು ‌ನೆಲಮಂಗಲದ ಬಳಿ‌ ₹4 ಕೋಟಿ ನಗದು ಜಪ್ತಿ ಮಾಡಿಕೊಂಡಿದ್ದ‌ ಪ್ರಕರಣದಲ್ಲಿ ನನ್ನ ವಿರುದ್ಧ ಪೊಲೀಸರು ವಿಚಾರಣಾ ನ್ಯಾಯಾಲಯಕ್ಕೆ ಸಲ್ಲಿಸಿರುವ ದೋಷಾರೋಪ ಪಟ್ಟಿ ರದ್ದುಪಡಿಸಬೇಕು’ ಎಂದು ಕೋರಿ‌ ಸಂಸದ ‌ಡಾ.‌ಕೆ.ಸುಧಾಕರ್ ಸಲ್ಲಿಸಿರುವ ಅರ್ಜಿ ವಿಚಾರಣೆಯಿಂದ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಹಿಂದೆ ಸರಿದಿದ್ದಾರೆ.

ಈ ಕುರಿತ ಅರ್ಜಿಯು ಶುಕ್ರವಾರ, ‘ಶಾಸಕರು– ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಪೀಠದಲ್ಲಿದ್ದ ನ್ಯಾಯಮೂರ್ತಿ ಕೃಷ್ಣ ಎಸ್‌.ದೀಕ್ಷಿತ್‌ ಅವರ ಮುಂದೆ ವಿಚಾರಣೆಗೆ ನಿಗದಿಯಾಗಿತ್ತು. ವಿಚಾರಣೆಗೆ ಕೂಗುತ್ತಿದ್ದಂತೆಯೇ, ಈ ಪ್ರಕರಣದ ವಿಚಾರಣೆಯಿಂದ ಹಿಂದೆ ಸರಿಯುತ್ತಿರುವುದಾಗಿ ನ್ಯಾಯಮೂರ್ತಿ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT