ನವದೆಹಲಿ: ಉತ್ತರ ಕನ್ನಡ ಜಿಲ್ಲೆಯ ಕಾಳಿ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಅಕ್ರಮ ಕಟ್ಟಡ ನಿರ್ಮಾಣ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್ಜಿಟಿ) ಪ್ರಧಾನ ಪೀಠ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ.

ನ್ಯಾಯಮೂರ್ತಿಗಳಾದ ಸುಧೀರ್ ಅಗರವಾಲ್, ಅರುಣ್ ಕುಮಾರ್ ತ್ಯಾಗಿ ಹಾಗೂ ಅಫ್ರೋಜ್ ಅಹ್ಮದ್ ಅವರನ್ನು ಒಳಗೊಂಡ ಪೀಠವು, ‘ಹುಲಿ ಸಂರಕ್ಷಿತ ಪ್ರದೇಶದ ಹೃದಯ ಭಾಗದಲ್ಲಿ ಅಕ್ರಮವಾಗಿ ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿ ನಡೆಸಲಾಗುತ್ತಿದ್ದು, ಇದಕ್ಕೆ ಸಂಬಂಧಿಸಿದ ಪ್ರಾಧಿಕಾರಗಳಿಂದ ಅನುಮತಿ ಪಡೆದಿಲ್ಲ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ’ ಎಂದಿತು.

ಕರ್ನಾಟಕ ಸರ್ಕಾರದ ಪರ ವಕೀಲರು, ‘ಈ ಕಟ್ಟಡಕ್ಕೂ ಪ್ರವಾಸೋದ್ಯಮಕ್ಕೂ ಯಾವುದೇ ಸಂಬಂಧ ಇಲ್ಲ. ಆದರೆ, ಇದು ಅರಣ್ಯ ಇಲಾಖೆಯು ಕೇಂದ್ರ ಪ್ರದೇಶದಲ್ಲಿ ಮರಗಳನ್ನು ಅಕ್ರಮವಾಗಿ ಕಡಿಯುವುದನ್ನು ತಡೆಯಲು ರಚಿಸಿರುವ ರಕ್ಷಣಾ ಶಿಬಿರ’ ಎಂದು ಸ್ಪಷ್ಟಪಡಿಸಿದರು. ಈ ಬಗ್ಗೆ ಲಿಖಿತ ಪ್ರತಿಕ್ರಿಯೆ ನೀಡಲು 15 ದಿನಗಳ ಕಾಲಾವಕಾಶ ನೀಡಬೇಕು ಎಂದು ಕೋರಿದರು. ಇದಕ್ಕೆ ಪೀಠವು ಒಪ್ಪಿತು. ಪ್ರಕರಣದ ವಿಚಾರಣೆಯನ್ನು ದಕ್ಷಿಣ ವಲಯ ಪೀಠಕ್ಕೆ ವರ್ಗಾಯಿಸಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.