ಬೆಂಗಳೂರು: ರಾಜ್ಯದಲ್ಲಿ ‘ಶಾಲಾ ಸಂಪರ್ಕ ಸೇತು’ ಯೋಜನೆಯಡಿ ಕೈಗೊಂಡ ಕಾಮಗಾರಿಗಳ ಪ್ರಗತಿಯನ್ನು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮಂಗಳವಾರ ವಿಡಿಯೊ ಸಂವಾದದ ಮೂಲಕ ವೀಕ್ಷಿಸಿ, ಬಾಕಿ ಇರುವ ಎಲ್ಲ ಕಾಮಗಾರಿಗಳನ್ನು 2–3 ತಿಂಗಳೊಳಗೆ ಸಂಪೂರ್ಣಗೊಳಿಸಲು ಕಟ್ಟಪ್ಪಣೆ ವಿಧಿಸಿದರು.

ಇದನ್ನೂ ಓದಿ:ಸೇತುವೆ ಕಟ್ಟಲು ಕಾನೂನು ಬಿಡುತ್ತಿಲ್ಲ!

ವಿಧಾನಸೌಧ ಸಮ್ಮೇಳನ ಸಭಾಂಗಣದಲ್ಲಿ ವಿಡಿಯೊ ಸಂವಾದ ಹಮ್ಮಿಕೊಳ್ಳಲಾಗಿತ್ತು. ‘ಪ್ರಜಾವಾಣಿ’ ಇತ್ತೀಚೆಗೆ ಪ್ರಕಟಿಸಿದ್ದ ಕಾಲು ಸೇತುವೆಗಳ ಕುರಿತ ‘ಕಾಲು ಸಂಕ(ಟ)’ ವರದಿಯನ್ನು ಸಭೆಯಲ್ಲಿ ಪ್ರಸ್ತಾಪಿಸಿದ ಮುಖ್ಯಮಂತ್ರಿ, ಅಧಿಕಾರಿಗಳಿಂದ ವಿವರಣೆ ಕೇಳಿದರು. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕಾಮಗಾರಿ ನಡೆಯುತ್ತಿರುವ ಸ್ಥಳದಿಂದಲೇ ಅಧಿಕಾರಿಗಳು ವಿಡಿಯೊ ಸಂವಾದಕ್ಕೆ ಹಾಜರಾಗಿದ್ದು ಈ ಬಾರಿಯ ವಿಶೇಷ.

ಇದನ್ನೂ ಓದಿ:ಇಲ್ಲದ ಸೇತುವೆ; ನದಿಗೆ ಕಿರುದೋಣಿ ಆಸರೆ

‘ಕಾಲು ಸಂಕ(ಟ)’ ವರದಿಯ ಹಿನ್ನೆಲೆಯಲ್ಲೇ ಮುಖ್ಯಮಂತ್ರಿಯವರು ಇಂದಿನ ಸಭೆ ಕರೆದಿದ್ದರು ಎಂದು ಮುಖ್ಯಮಂತ್ರಿ ಕಚೇರಿ ಮೂಲಗಳು ತಿಳಿಸಿವೆ.

ಇದನ್ನೂ ಓದಿ:ಹಾಸನ: ಸಾವಿಗೂ ಕರಗದ ಆಡಳಿತ

ಕಳೆದ ವರ್ಷ ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಶಾಲಾ ವಿದ್ಯಾರ್ಥಿನಿ ಆಶಿಕಾ ಕಾಲು ಸಂಕ ದಾಟುವಸಂದರ್ಭ ನೀರು ಪಾಲಾಗಿ ಮೃತಪಟ್ಟ ಸುದ್ದಿಯನ್ನು ಗಮನಿಸಿ ಮುಖ್ಯಮಂತ್ರಿ ಕುಮಾರಸ್ವಾಮಿ ಶಾಲಾ ಸಂಪರ್ಕಸೇತು ಯೋಜನೆ ಜಾರಿ ಮಾಡಿದರು. ನದಿ, ಹಳ್ಳ, ತೊರೆಯನ್ನು ದಾಟಲು ಅನುಕೂಲವಾಗುವಂತೆ ನಿರ್ಮಿಸಲಾಗಿದ್ದ ಕಾಲು ಸಂಕಗಳನ್ನು ಬದಲಾಯಿಸಿ ಶಾಶ್ವತವಾದ ಕಿರು
ಸೇತುವೆಗಳನ್ನು ನಿರ್ಮಿಸುವಂತೆ ಸೂಚಿಸಿ ಆಯವ್ಯಯದಲ್ಲಿ ಅನುದಾನಮೀಸಲಿಟ್ಟಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.