‘ಬೆಂಗಳೂರಿನ ವಾಣಿಜ್ಯ ಮಳಿಗೆಗಳ ನಾಮಫಲಕದಲ್ಲಿ ಶೇ 60ರಷ್ಟು ಕನ್ನಡ ಅಕ್ಷರಗಳ ಬಳಕೆ ಕಡ್ಡಾಯಗೊಳಿಸಲಾಗಿದೆ. ಇದಕ್ಕೆ ಫೆಬ್ರುವರಿ 28 ಕಡೆಯ ದಿನವಾಗಿದ್ದು, ಕನ್ನಡವನ್ನು ಉಳಿಸಿ, ಕನ್ನಡತನವನ್ನು ಬೆಳೆಸುವ ಸಲುವಾಗಿ ಈ ನಿಯಮ ತರಲಾಗಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಈ ಬಗ್ಗೆ ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿ ಮನವಿ ಮಾಡಿಕೊಂಡಿರುವ ಅವರು, ‘ನಿಯಮ ಪಾಲನೆ ಮಾಡುವ ಮೂಲಕ ಹೆಮ್ಮೆಯ ಕನ್ನಡಿಗರೆನಿಸಿಕೊಳ್ಳಿ’ ಎಂದರು. ‘ಕರ್ನಾಟಕದಲ್ಲಿ ಹುಟ್ಟಿ ಬೆಳೆದವರು, ಹೊರರಾಜ್ಯದಿಂದ ಇಲ್ಲಿಗೆ ಬಂದು ಬದುಕು ಕಟ್ಟಿಕೊಂಡವರನ್ನು ನಾವು ಕನ್ನಡಿಗರೇ ಎಂದು ಭಾವಿಸಿದ್ದೇವೆ. ಕನ್ನಡ ನೆಲದಲ್ಲಿ ಕನ್ನಡಕ್ಕೇ ಮೊದಲ ಪ್ರಾಶಸ್ತ್ಯ. ಅನ್ನ ಕೊಡುವ ಈ ನೆಲದ ನಿಯಮ ಪಾಲನೆ ಮಾಡಬೇಕಿರುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ’ ಎಂದು ಹೇಳಿದ್ದಾರೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.