ಬೆಂಗಳೂರು:ಕನ್ನಡ ಶಾಲೆ ಉಳಿಸಿ, ಬೆಳೆಸುವ ಬಗ್ಗೆಕನ್ನಡ ಸಾಹಿತ್ಯ ಪರಿಷತ್ತು (ಕಸಾಪ) ಸಾಹಿತಿ ಎಸ್.ಎಲ್. ಭೈರಪ್ಪ ಅವರ ಅಧ್ಯಕ್ಷತೆಯಲ್ಲಿ ಇದೇ 5ರ ಬೆಳಿಗ್ಗೆ 11 ಗಂಟೆಗೆ ದುಂಡು ಮೇಜಿನ ಸಭೆ ಹಮ್ಮಿಕೊಂಡಿದೆ.

ಪರಿಷತ್ತಿನ ಕೇಂದ್ರ ಕಚೇರಿಯಲ್ಲಿ ಈ ಸಭೆ ನಡೆಯಲಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ಸಭೆ ಉದ್ಘಾಟಿಸಲಿದ್ದಾರೆ.ವೀರಭದ್ರ ಚನ್ನಮಲ್ಲ ಸ್ವಾಮೀಜಿ ಹಾಗೂ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಹೈಕೋರ್ಟ್ವಿಶ್ರಾಂತ ನ್ಯಾಯಮೂರ್ತಿಗಳಾದ ಎನ್. ಕುಮಾರ್ ಹಾಗೂ ನಾಗಮೋಹನ್ ದಾಸ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಪರಿಷತ್ತಿನ ಅಧ್ಯಕ್ಷ ಮಹೇಶ ಜೋಶಿ ಅವರು ಆಶಯ ನುಡಿಗಳನ್ನಾಡಲಿದ್ದಾರೆ. ವಿದ್ವಾಂಸ ಪ್ರಧಾನ ಗುರುದತ್ತ ಅವರು ವಿಶೇಷ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಶಿಕ್ಷಣ ತಜ್ಞರು, ಸಾಹಿತಿಗಳು, ನ್ಯಾಯಮೂರ್ತಿಗಳು, ಚಿಂತಕರು, ಕನ್ನಡ ಪರ ಹೋರಾಟಗಾರರು ಒಳಗೊಂಡಂತೆ 27 ಮಂದಿ ಸಭೆಯಲ್ಲಿ ಭಾಗವಹಿಸಲಿದ್ದಾರೆ.

‘ಸರ್ಕಾರವು ಕನ್ನಡ ಶಾಲೆಗಳನ್ನು ಕ್ರಮೇಣ ಮುಚ್ಚುತ್ತ ಹೊರಟಿದೆ. ಕನ್ನಡ ಶಾಲೆಗಳ ಮುಚ್ಚುವಿಕೆಗೆ ಸರ್ಕಾರ ಶಾಲೆಗಳ ವಿಲೀನ ಎಂದು ಕರೆಯುತ್ತಿದೆ. ಇರುವ ಕನ್ನಡ ಮಾಧ್ಯಮ ಶಾಲೆಗಳನ್ನೂ ಹಂತ ಹಂತವಾಗಿ ‘ಕರ್ನಾಟಕ ಪಬ್ಲಿಕ್ ಶಾಲೆ’ ಎಂಬ ಹೆಸರಿನಲ್ಲಿ ಇಂಗ್ಲಿಷ್ ಮಾಧ್ಯಮ ಶಾಲೆಗಳನ್ನಾಗಿ ಪರಿವರ್ತಿಸಲಾಗುತ್ತಿದೆ.ಕನ್ನಡ ಶಾಲೆಗಳ ಮೇಲಿನ ಈ ಪ್ರಹಾರದಿಂದ ಕನ್ನಡವು ಕರ್ನಾಟಕದಲ್ಲೇ ಸೊರಗಲಾರಂಭಿಸಿದೆ.ಕನ್ನಡ ಶಾಲೆಗಳು ಉಳಿಯದಿದ್ದರೆ ಕನ್ನಡದ ಅಸ್ತಿತ್ವ ಅಲುಗಾಡುತ್ತದೆ. ಹೀಗಾಗಿ, ಈ ಬಗ್ಗೆ ಚರ್ಚಿಸಲುದುಂಡು ಮೇಜಿನ ಸಭೆ ಕರೆಯಲಾಗಿದೆ’ ಎಂದು ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.