ಬೆಂಗಳೂರು: ‘ಆತ್ಮಸಾಕ್ಷಿಗೆ ಅನು ಗುಣವಾಗಿ ನಡೆಯುವುದು ಬಹಳ ಕಷ್ಟದ ಕೆಲಸ. ಅದಕ್ಕೆ ವಿಘ್ನಗಳು ಎದುರಾಗುತ್ತಲೇ ಇರುತ್ತವೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಅಭಿಮಾನಿ ಪ್ರಕಾಶನ ಪ್ರಕಟಿಸಿರುವ ಪತ್ರಕರ್ತ ಪಿ.ರಾಮಯ್ಯ ಅವರ 60 ವರ್ಷಗಳ ಅನುಭವ ಕಥನ ‘ನಾನು ಹಿಂದೂ ರಾಮಯ್ಯ’ ಪುಸ್ತಕ ಬಿಡುಗಡೆ ಮಾಡಿ ಮಾತನಾಡಿದ ಅವರು, ‘ಆತ್ಮಸಾಕ್ಷಿಯಂತೆ ನಡೆದುಕೊಳ್ಳಲು ಒಂದಿಲ್ಲೊಂದು ಒತ್ತಡಗಳು ಅಡ್ಡಿಯಾಗುತ್ತಲೇ ಇರುತ್ತವೆ. ಆತ್ಮಸಾಕ್ಷಿಯಂತೆ ನಡೆದುಕೊಳ್ಳಲಿಲ್ಲ ಎಂಬ ಸಂಕಟ ಕಾಡುತ್ತಲೇ ಇರುತ್ತವೆ’
ಎಂದರು.

‘ಪಿ.ರಾಮಯ್ಯ ಅವರು ಆತ್ಮಸಾಕ್ಷಿಗೆ ವಂಚನೆ ಮಾಡಿಕೊಳ್ಳದೆ ನೈಜ ಪತ್ರಕರ್ತನಾಗಿ ಕೆಲಸ ಮಾಡಿದ್ದಾರೆ. ರಾಮಯ್ಯ ಅವರನ್ನು ಬಾಲ್ಯದಿಂದ ನೋಡಿ ಬೆಳೆದಿದ್ದೇನೆ. ಅವರಿಂದ ಬಹಳಷ್ಟು ಕಲಿತಿದ್ದೇನೆ. ನನ್ನ ತಂದೆ ಜತೆಗೂ ಸಾಕಷ್ಟ ಒಡನಾಟ ಇಟ್ಟುಕೊಂಡಿದ್ದರು. ರಾಮಕೃಷ್ಣ ಹೆಗಡೆ, ಎಚ್.ಡಿ.ದೇವೇಗೌಡ, ಜೆ.ಎಚ್.ಪಟೇಲ್ ಸೇರಿ ಎರಡು ತಲೆಮಾರಿನ ರಾಜಕಾರಣ ಮತ್ತು ಮೂರು ತಲೆಮಾರಿನ ಪತ್ರಿಕೋದ್ಯಮವನ್ನು ಅವರು ನೋಡಿದ್ದಾರೆ. ಅವರ ಬದುಕು ಇತರರಿಗೆ ಸ್ಫೂರ್ತಿ’ ಎಂದು ಹೇಳಿದರು.

ಕೃತಿ ಕುರಿತು ಮಾತನಾಡಿದ ‘ಸಂಯುಕ್ತ ಕರ್ನಾಟಕ’ ಪತ್ರಿಕೆ ಪ್ರಧಾನ ಸಂಪಾದಕ ಹುಣಸವಾಡಿ ರಾಜನ್ ಮಾತನಾಡಿ, ‘ದೇವರಾಜ ಅರಸು ಅವರೊಂದಿಗಿನ ಅನುಭವವನ್ನು ಪಿ.ರಾಮಯ್ಯ ಅವರು ಸಮಗ್ರ ದೃಷ್ಟಿಯಿಂದ ಚಿತ್ರಿಸಿದ್ದಾರೆ. ಎಚ್.ಡಿ. ದೇವೇಗೌಡರ ಜೊತೆಗಿನ ಒಡನಾಟವನ್ನೂ ಸುದೀರ್ಘವಾಗಿ ಉಲ್ಲೇಖಿಸಿದ್ದಾರೆ’ ಎಂದರು.

ಪಿ.ರಾಮಯ್ಯ ಮಾತನಾಡಿ,‘ಪತ್ರಕರ್ತನಾಗಿ ಕೆಲಸ ಮಾಡಿದ 45 ವರ್ಷಗಳ ಅವಧಿಯಲ್ಲಿ ಎಲ್ಲಾ ವರ್ಗದವರ ಪ್ರೀತಿ ಗಳಿಸಿರುವುದೇ ನನ್ನ ದೊಡ್ಡ ಆಸ್ತಿ’ ಎಂದುಭಾವುಕರಾದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.