ಬೆಂಗಳೂರು: ಚೀನಾ ಸೇರಿದಂತೆ ಹಲವು ದೇಶಗಳಲ್ಲಿ ಕೊರೊನಾ ವೈರಸ್‌ನ ಹೊಸ ತಳಿಯ ಕಾರಣಕ್ಕೆ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ರೋಗ ತಡಗೆ ರಾಜ್ಯದಲ್ಲೂ ಕೆಲವು ಮಾರ್ಗ ಸೂಚಿಗಳನ್ನು ಜಾರಿಗೆ ತರಲಾಗಿದೆ.

ಮಾರ್ಗ ಸೂಚಿಗೆ ಸಂಬಂಧಿಸಿದಂತೆ ಸೋಮವಾರ ನಡೆದ ಸರ್ಕಾರದ ಸಭೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿರುವ ಆರೋಗ್ಯ ಸಚಿವ ಸುಧಾಕರ್ ಮತ್ತು ಕಂದಾಯ ಸಚಿವ ಆರ್. ಆಶೋಕ ಹೊಸ ನಿಯಮಗಳನ್ನು ಪ್ರಕಟಿಸಿದರು.

‘ಚಿತ್ರಮಂದಿರಗಳು, ಶಾಲಾ-ಕಾಲೇಜುಗಳಲ್ಲಿ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ. ಪಬ್‌ಗಳು, ರೆಸ್ಟೋರೆಂಟ್‌ಗಳು ಮತ್ತು ಬಾರ್‌ಗಳಲ್ಲಿ ಹೊಸ ವರ್ಷ ಆಚರಿಸುವ ವೇಳೆ ಮಾಸ್ಕ್ ಧರಿಸಿರಲೇಬೇಕು. ಹೊಸ ವರ್ಷದ ಆಚರಣೆಗಳು ರಾತ್ರಿ 1ರ ಒಳಗೇ ಅಂತ್ಯವಾಗಬೇಕು. ಯಾರೂ ಭಯಪಡಬೇಕಿಲ್ಲ... ಮುನ್ನೆಚ್ಚರಿಕೆ ವಹಿಸಬೇಕು’ ಎಂದು ಸುಧಾಕರ್ ಹೇಳಿದರು.

'ಆಚರಣೆಗಳು ನಡೆಯುವ ಸ್ಥಳಗಳಲ್ಲಿ ಅನುಮತಿಸಲಾದ ಸಾಮರ್ಥ್ಯಕ್ಕಿಂತ ಹೆಚ್ಚು ಜನರು ಇರಬಾರದು'ಎಂದು ಅವರು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.