ಬೆಂಗಳೂರು: ರಾಜ್ಯದ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರಿಗೆ ಇದೇ 21ರಿಂದ ನ.1ರವರೆಗೆ ದಸರಾ ರಜೆ ಘೋಷಿಸಲಾಗಿದೆ.

‘ಪದವಿಪೂರ್ವ ಶಿಕ್ಷಣ ಉಪನ್ಯಾಸಕರಿಗೆ ರಜೆ ಘೋಷಿಸಲು ಇಲಾಖೆಯ ಅಧಿಕಾರಿಗಳಿಗೆ ಸೂಚನೆ
ನೀಡಲಾಗಿದೆ’ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್‌ಕುಮಾರ್ ಶುಕ್ರವಾರ ಟ್ವೀಟ್ ಮೂಲಕ ತಿಳಿಸಿದರು.

ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಶಿಕ್ಷಕರಿಗೆ ಅ.12ರಿಂದ 30ರವರೆಗೆ ಮಧ್ಯಂತರ ರಜೆ ಘೋಷಿಸಿದ ನಂತರ, ದಸರಾ ರಜೆಗಾಗಿ ಉಪನ್ಯಾಸಕರು ಕೂಡ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು.

‘ಮೂರು ವಾರಗಳ ದಸರಾ ರಜೆನೀಡಿ, ಮನೆಯಿಂದಲೇ ಯೂಟ್ಯೂಬ್ ತರಗತಿಗಳನ್ನು ನಿರ್ವಹಿಸಲು ಅವಕಾಶ ನೀಡಬೇಕು’ ಎಂದು ಉಪನ್ಯಾಸಕರ ಸಂಘ ಕೋರಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.