ನವದೆಹಲಿ: ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಕರ್ನಾಟಕ ವಿಧಾನಸಭೆ ಚುನಾವಣೆಯ ದಿನಾಂಕವನ್ನು ದೆಹಲಿಯಲ್ಲಿ ಇಂದು ಬೆಳಿಗ್ಗೆ ಪ್ರಕಟಿಸಿದ್ದಾರೆ.

ಮೇ10 ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆದು, ಫಲಿತಾಂಶ ಹೊರಬೀಳಲಿದೆ.

ಏಪ್ರಿಲ್ 13ರಂದು ಚುನಾವಣೆಗೆ ಅಧಿಸೂಚನೆ ಹೊರಡಿಸಲಿದ್ದು, ಇಂದಿನಿಂದಲೇ ನೀತಿಸಂಹಿತೆ ಜಾರಿಗೆ ಬರಲಿದೆ.

ಏಪ್ರಿಲ್ 20ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದು, 21ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಏಪ್ರಿಲ್ 24 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ

ರಾಜ್ಯದಲ್ಲಿ 5.22 ಕೋಟಿ ಮತದಾರರರಿದ್ದು, 2,62,42,561 ಪುರುಷ ಮತದಾರರು, 2,59,26,319 ಮಹಿಳಾ ಮತದಾರರು ಇದ್ದಾರೆ.

ಇದರಲ್ಲಿ 9,17,241 ಮೊದಲ ಬಾರಿ ಮತದಾರರು, 80 ವರ್ಷ ಮೇಲ್ಪಟ್ಟ 12,15,763 ಮತದಾರರು. ದಿವ್ಯಾಂಗರು 5,55,073 ಮತದಾರರು, 4,699 ತೃತೀಯ ಲಿಂಗಿ ಮತದಾರರು ಇದ್ದಾರೆ.

80 ವರ್ಷ ಮೇಲ್ಪಟ್ಟವರಿಗೆ ಮನೆಯಿಂದಲೇ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದೆ.

ರಾಜ್ಯದಲ್ಲಿ ಈ ಬಾರಿ ಒಟ್ಟು 52,282 ಮತಗಟ್ಟೆಗಳಲ್ಲಿ ಮತದಾನ ನಡೆಯಲಿದೆ. 24,063 ನಗರ ಪ್ರದೇಶದಲ್ಲಿ, 34,219 ಗ್ರಾಮೀಣ ಮತಗಟ್ಟೆಗಳನ್ನು ನಿರ್ಮಾಣ ಮಾಡಲಾಗುತ್ತದೆ. 12 ಸಾವಿರ ಸೂಕ್ಷ್ಮ ಮತಗಟ್ಟೆಗಳನ್ನು ಗುರುತಿಸಲಾಗಿದೆ.

ವಿಶೇಷವಾಗಿ ಯುವ ಸಿಬ್ಬಂದಿ ಮಾತ್ರ ನಿರ್ವಹಿಸುವ 224 ಪ್ರತ್ಯೇಕ ಮತಗಟ್ಟೆ, ಮಹಿಳೆಯೇ ನಿರ್ವಹಿಸು 1320 ಮತಗಟ್ಟೆಗಳು ಇರುತ್ತವೆ. ಸರಾಸರಿ 883 ಮತದಾರರಿಗೊಂದು ಮತಗಟ್ಟೆ ನಿರ್ಮಾಣ ಮಾಡಲಾಗುತ್ತದೆ.

ಚುನಾವಣಾ ಆಯೋಗದ ಆ್ಯಪ್‌ನಲ್ಲಿ ಅಭ್ಯರ್ಥಿಗಳ ಸಂಪೂರ್ಣ ವಿವರ ಲಭ್ಯವಿರುತ್ತದೆ.

ಅಭ್ಯರ್ಥಿಯ ಅಫಿಡವಿಟ್ KYC-ECI  ಆ್ಯಪ್‌ನಲ್ಲಿ ಲಭ್ಯವಿರಲಿದ್ದು, ಚುನಾವಣಾ ಅಕ್ರಮದ ಬಗ್ಗೆ C Vigil ಆ್ಯಪ್‌ನಲ್ಲಿ ಮತದಾರರು ದೂರು ಸಲ್ಲಿಸಬಹುದಾಗಿದೆ. ದೂರು ಸಲ್ಲಿಸಿದರೆ ಕ್ರಮ ಕೈಗೊಳ್ಳುವುದಾಗಿ ಚುನಾವಣಾ ಆಯೋಗ ಭರವಸೆ ನೀಡಿದೆ. ಚುನಾವಣಾ ಅಕ್ರಮ ತಡೆಗೆ 2400 ತಂಡಗಳ ರಚನೆ ಮಾಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.