ಮುಳಬಾಗಿಲು: ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಶನಿವಾರ (14ರಂದು) ಅಧಿಕೃತವಾಗಿ ಕಾಂಗ್ರೆಸ್ ಪಕ್ಷ ಸೇರುವುದಾಗಿ ಮುಳಬಾಗಿಲು ಪಕ್ಷೇತರ ಶಾಸಕ ಎಚ್. ನಾಗೇಶ್ ಹೇಳಿದ್ದಾರೆ.

ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಾ.ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಈಗಾಗಲೇ ರಾಜೀನಾಮೆ ಸಲ್ಲಿಸಿರುವುದಾಗಿ ತಿಳಿಸಿದರು.

‘ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ವಕ್ಷೇತ್ರ ಬೆಂಗಳೂರಿನ ಮಹದೇವಪುರದಿಂದ ಸ್ಪರ್ಧಿಸುವಂತೆ ಅಲ್ಲಿನ ಕಾರ್ಯಕರ್ತರು ಒತ್ತಡ ಹೇರುತ್ತಿದ್ದಾರೆ. ಆದರೆ, ಕಾಂಗ್ರೆಸ್ ಹೈಕಮಾಂಡ್ ಯಾವ ಕ್ಷೇತ್ರದಿಂದ ಸ್ಪರ್ಧಿಸಲು ಅವಕಾಶ ನೀಡುತ್ತದೆಯೋ ಆ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ’ ಎಂದು ಅವರು ಸ್ಪಷ್ಟಪಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.