ಬೆಂಗಳೂರು: ವಿಧಾನ ಪರಿಷತ್ನ ವಿರೋಧ ಪಕ್ಷದ ನಾಯಕರಾಗಿ ಕೋಟಾ ಶ್ರೀನಿವಾಸ ಪೂಜಾರಿ ಅವರನ್ನು ನೇಮಕ ಮಾಡಲಾಗಿದೆ.

ಆ ಮೂಲಕ ಸುಮಾರು 7 ತಿಂಗಳ ಬಳಿಕ ವಿಧಾನ ಪರಿಷತ್ಗೆ ವಿರೋಧ ಪಕ್ಷದ ನಾಯಕನ ನೇಮಕವಾದಂತೆ ಆಗಿದೆ.
.ಸರ್ಕಾರ ವಿಸರ್ಜಿಸುವುದೇ ಉತ್ತಮ: ಕೋಟಾ ಶ್ರೀನಿವಾಸ ಪೂಜಾರಿ.
ಸುನಿಲ್ ವಲ್ಯಾಪುರೆ ಅವರನ್ನು ಪರಿಷತ್ ವಿರೋಧ ಪಕ್ಷದ ಉಪನಾಯಕರಾಗಿಯೂ, ಎನ್. ರವಿಕುಮಾರ್ ಅವರನ್ನು ಮುಖ್ಯ ಸಚೇತರಕರಾಗಿಯೂ ನೇಮಿಸಲಾಗಿದೆ.

ಹುಬ್ಬಳ್ಳಿ–ಧಾರವಾಡ ಪಶ್ಚಿಮ ಕ್ಷೇತ್ರದ ಶಾಸಕ ಅರವಿಂದ ಬೆಲ್ಲದ ಅವರನ್ನು ವಿಧಾನಸಭೆಯ ಉಪನಾಯಕನನ್ನಾಗಿ ನೇಮಕ ಮಾಡಲಾಗಿದೆ.

ಕುಷ್ಟಗಿ ಶಾಸಕ ದೊಡ್ಡನಗೌಡ ಪಾಟೀಲ್ ಅವರನ್ನು ಕೆಳಮನೆಯ ಮುಖ್ಯಸಚೇತಕರಾಗಿ ನೇಮಿಸಲಾಗಿದೆ.
.ವಿರೋಧ ಪಕ್ಷದ ನಾಯಕ ಸ್ಥಾನ ಮಾರಾಟಕ್ಕೆ ಇಟ್ಟ ಬಿಜೆಪಿ: ಎಂ.ಬಿ.ಪಾಟೀಲ ಲೇವಡಿ.
ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರ ಸೂಚನೆ ಮೇರೆಗೆ ಇವರನ್ನು ನೇಮಕ ಮಾಡಿದ್ದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.