ಬೆಂಗಳೂರು: ನವದೆಹಲಿಯ ಕರ್ನಾಟಕ ಭವನದ ನಂ.1 (ಕಾವೇರಿ) ಹೊಸ ಕಟ್ಟಡದ ನಿರ್ಮಾಣಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಭೂಮಿ ಪೂಜೆ ನೆರವೇರಿಸಲಿದ್ದು, ಸ್ವತಃ ಯಡಿಯೂರಪ್ಪ ಅವರೇ ಈ ಹಿಂದೆ ಕಟ್ಟಡದ ನಿರ್ಮಾಣಕ್ಕೆ ಅಡಿಗಲ್ಲು ಹಾಕಿದ್ದರು.

ಈ ಕಟ್ಟಡದ ನಿರ್ಮಾಣಕ್ಕೆ 2019 ರಲ್ಲಿ ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದಾಗ ಭೂಮಿ ಪೂಜೆ ನೆರವೇರಿತ್ತು. ಆಗ
ವಿರೋಧ ಪಕ್ಷದ ನಾಯಕರಾಗಿದ್ದ ಯಡಿಯೂರಪ್ಪ ಅವರೂ ಆಕಸ್ಮಾತ್ ಆಗಿ ಅಡಿಗಲ್ಲು ಹಾಕಬೇಕಾದ ಪ್ರಸಂಗ ಒದಗಿ ಬಂದಿತ್ತು.

ಕರ್ನಾಟಕ ಭವನದ ಹಳೇ ಕಟ್ಟಡ ನೆಲಸಮ ಮಾಡಿ, ಹೊಸ ಕಟ್ಟಡ ನಿರ್ಮಾಣಕ್ಕೆ ಸಿದ್ದರಾಮಯ್ಯ ಸರ್ಕಾರ ಅನುಮೋದನೆ ನೀಡಿತ್ತು. ಆ ಬಳಿಕ ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ಸರ್ಕಾರ ಹೊಸ ಕಟ್ಟಡದ ಯೋಜನೆಗೆ ಅನುಮತಿ ನೀಡಿ, 2019 ರ ಮಾರ್ಚ್ 8 ರ ಸಂಜೆ ಭೂಮಿ ಪೂಜೆಯ ದಿನಾಂಕ ನಿಗದಿ ಮಾಡಲಾಗಿತ್ತು.

ಆದರೆ, ಅಂದಿನ ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಅವರು, ಸಂಜೆಯ ಮುಹೂರ್ತ ಸರಿಯಿಲ್ಲ. ಬೆಳಿಗ್ಗೆ
ಮುಹೂರ್ತ ಒಳ್ಳೆಯದಿದ್ದು, ಆಸಮಯಕ್ಕೆ ಭೂಮಿ ಪೂಜೆ ಮಾಡುವುದು ಸೂಕ್ತ ಎಂದು ಸಲಹೆ ನೀಡಿ ಕಾರ್ಯಕ್ರಮದ ಸಮಯ ಬದಲಾಯಿಸಿದ್ದರು.

ಮಾರ್ಚ್ 8 ರ ಬೆಳಿಗ್ಗೆ ರೇವಣ್ಣ ಅವರು ಭೂಮಿ ಪೂಜೆ ನಡೆಸಲು ಪುರೋಹಿತರ ಜತೆ ಬಿಜಿಯಾಗಿದ್ದರು. ಯಡಿಯೂರಪ್ಪ ಅವರು ಬೇರೆ ಕೆಲಸದ ನಿಮಿತ್ತ ಕರ್ನಾಟಕ ಭವನದಲ್ಲಿ ಬೀಡು ಬಿಟ್ಟಿದ್ದರು. ಅವರು ಬೆಳಿಗ್ಗೆ ಕರ್ನಾಟಕ ಭವನದ ಆವರಣದಲ್ಲಿ ವಾಯುವಿಹಾರಕ್ಕೆ ಹೊರಟಿದ್ದರು. ಇದನ್ನು ನೋಡಿದ ರೇವಣ್ಣ ಅವರು ತಕ್ಷಣವೇ ಯಡಿಯೂರಪ್ಪ ಅವರನ್ನು ಕರೆದು ಅಡಿಗಲ್ಲು ಹಾಕುವಂತೆ ಮನವಿ ಮಾಡಿದರು.

ಆಹ್ವಾನ ಪತ್ರಿಕೆಯಲ್ಲಿ ಯಡಿಯೂರಪ್ಪ ಅವರ ಹೆಸರೂ ಇರಲಿಲ್ಲ. ಆದರೂ ರೇವಣ್ಣ ಅವರ ಒತ್ತಾಯಕ್ಕೆ ಮಣಿದು ಅಡಿಗಲ್ಲು ಹಾಕಿದರು. ಅದೇ ದಿನ ಸಂಜೆ ಕುಮಾರಸ್ವಾಮಿ ಅವರು ಸರ್ಕಾರದ ಕಾರ್ಯಕ್ರಮದ ಪ್ರಕಾರ, ಕಟ್ಟಡ ನಿರ್ಮಾಣದ ಶಿಲಾನ್ಯಾಸ ನೆರವೇರಿಸಿದರು.

ಕಟ್ಟಡದ ಹಿಂದಿನ ಅಂದಾಜು ವೆಚ್ಚ ₹82 ಕೋಟಿ. ಬಿಜೆಪಿ ಸರ್ಕಾರ ಹೊಸ ವಿನ್ಯಾಸದೊಂದಿಗೆ ₹120 ಕೋಟಿ ವೆಚ್ಚದಲ್ಲಿ ಕಟ್ಟಡ ನಿರ್ಮಿಸಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.