ಬೆಂಗಳೂರು: ಸಿ.ಡಿ.ಪ್ರಕರಣಕ್ಕೆ ಸಂಬಂಧಿಸಿ ಕಾಂಗ್ರೆಸ್ ಧ್ವನಿ ಎತ್ತುತ್ತಿರುವುದು ಸಂತ್ರಸ್ತೆಗಾಗಿ ಅಲ್ಲ, ಬದಲಿಗೆ ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗಾಗಿ ಎಂದು ಬಿಜೆಪಿ ವ್ಯಂಗ್ಯವಾಡಿದೆ.

ಕಾಂಗ್ರೆಸ್ ನಡೆಯನ್ನು ಟೀಕಿಸಿ ಬಿಜೆಪಿಯ ರಾಜ್ಯ ಘಟಕದ ಅಧಿಕೃತ ಟ್ವಿಟರ್ ಖಾತೆಯಿಂದ ಟ್ವೀಟ್ ಮಾಡಲಾಗಿದ್ದು, ಮಾಜಿ ಅಬಕಾರಿ ಸಚಿವ ಎಚ್.ವೈ.ಮೇಟಿ ಪ್ರಕರಣವನ್ನು (2016 ರಲ್ಲಿ ಎಚ್.ವೈ.ಮೇಟಿ ವಿರುದ್ಧ ಅತ್ಯಾಚಾರ ಆರೋಪ ಬಂದಿತ್ತು) ಉಲ್ಲೇಖಿಸಲಾಗಿದೆ.

ಓದಿ:ರಮೇಶ ಜಾರಕಿಹೊಳಿಗೆ ಕೋವಿಡ್: ಗೋಕಾಕ ಆಸ್ಪತ್ರೆ ಐಸಿಯುನಲ್ಲಿ ಚಿಕಿತ್ಸೆ

‘ಮೇಟಿ ಪ್ರಕರಣದಲ್ಲಿ ಸಂತ್ರಸ್ತೆ ಪ್ರಕರಣ ದಾಖಲಿಸಿದ್ದರೂ ಎಫ್‌ಐಆರ್ ಕೂಡಾ ದಾಖಲಿಸಿರಲಿಲ್ಲ, ವಿಚಾರಣೆ ಕೂಡಾ ನಡೆಸಿರಲಿಲ್ಲ. ಈಗ ಕರ್ನಾಟಕ ಕಾಂಗ್ರೆಸ್ ಧ್ವನಿ ಎತ್ತುತ್ತಿರುವುದು ಸಂತ್ರಸ್ತೆಗಾಗಿ ಅಲ್ಲ, ಸಿದ್ದರಾಮಯ್ಯ ಅವರಿಗಾಗಿ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಸಿಕ್ಕಿಸಿಹಾಕಲು ಸಿದ್ದರಾಮಯ್ಯ ಅವರು ಪಕ್ಷದ ಅಧಿಕೃತ ಟ್ವಿಟರ್ ಖಾತೆಯನ್ನು ಬಳಸಿಕೊಳ್ಳುತ್ತಿದ್ದಾರೆ’ ಎಂದು ಬಿಜೆಪಿ ಟ್ವೀಟ್ ಮಾಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.