ಬೆಂಗಳೂರು: ಬಿಜೆಪಿಯ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಇಂದು ಬಿಜೆಪಿ ಮುಖಂಡ ಎಸ್.ಎಂ.ಕೃಷ್ಣ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿ ಆಶೀರ್ವಾದ ಪಡೆದಿದ್ದಾರೆ.

ಬಿ.ವೈ.ವಿಜಯೇಂದ್ರ ಅಧ್ಯಕ್ಷರಾದ ಬಳಿಕ ಇದು ಅವರ ಮೊದಲ ಭೇಟಿಯಾಗಿದೆ. ವಿಜಯೇಂದ್ರ ಅವರು ನ.15ರಂದು (ಬುಧವಾರ) ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.

ದೇವೇಗೌಡರನ್ನು ಭೇಟಿಯಾದ ವಿಜಯೇಂದ್ರ

ಬೆಂಗಳೂರು: ಬಿಜೆಪಿಯ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಇಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿ ಆಶೀರ್ವಾದ ಪಡೆದಿದ್ದಾರೆ.

ಇದೇ ವೇಳೆ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಬಿ.ವೈ.ವಿಜಯೇಂದ್ರ ಅವರು, ಮಾಜಿ ಪ್ರಧಾನಮಂತ್ರಿ ದೇವೇಗೌಡರನ್ನು ಇವತ್ತು ಭೇಟಿ ಮಾಡಿ ದೀಪಾವಳಿ ಶುಭಾಶಯ ಕೋರಿದ್ದೇನೆ. ಅವರ ಆಶೀರ್ವಾದ ಪಡೆದಿದ್ದೇನೆ ಎಂದು ತಿಳಿಸಿದ್ದಾರೆ.

ಇಷ್ಟು ದೊಡ್ಡ ರಾಷ್ಟ್ರೀಯ ಪಕ್ಷದಲ್ಲಿ ಇಷ್ಟು ಚಿಕ್ಕ ವಯಸ್ಸಿಗೇ ದೊಡ್ಡ ಜವಾಬ್ದಾರಿ ಕೊಟ್ಟ ಬಗ್ಗೆ ಹೆಮ್ಮೆ ಪಟ್ಟಿದ್ದಾರೆ. ತಂದೆಯವರಾದ ಯಡಿಯೂರಪ್ಪ ಅವರು ಕಾಲಿಗೆ ಚಕ್ರ ಕಟ್ಟಿಕೊಂಡು ರಾಜ್ಯಾದ್ಯಂತ ಪ್ರವಾಸ ಮಾಡಿ ಸಂಘಟನೆಗೆ ಶಕ್ತಿ ತುಂಬಿದ ಮಾದರಿಯಲ್ಲಿ ನೀನು ಕೂಡ ಯಶಸ್ವಿ ಆಗುವಂತೆ ಹರಸಿದ್ದಾಗಿ ತಿಳಿಸಿದ್ದಾರೆ.
.‘ಕೈ‘ನತ್ತ ವಲಸೆಗೆ ತಡೆ: ವಿಜಯೇಂದ್ರ ಕಾರ್ಯತಂತ್ರ.ಅಧಿಕಾರಕ್ಕೆ ಬಂದ 6 ತಿಂಗಳಲ್ಲೇ ಜನಪ್ರಿಯತೆ ಕಳೆದುಕೊಂಡ ಕಾಂಗ್ರೆಸ್: ವಿಜಯೇಂದ್ರ .BJP ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಆಯ್ಕೆ: ಬಿಜೆಪಿಯಲ್ಲಿ ಸಂಭ್ರಮದ ಜೊತೆ ಮುನಿಸು!.ಕುಟುಂಬ ರಾಜಕಾರಣದ ಪ್ರಶ್ನೆ ನನ್ನನ್ನೂ ಕಾಡುತ್ತಿದೆ: ಸಿ.ಟಿ. ರವಿ .

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.