ಬೆಂಗಳೂರು: ರಾಜ್ಯ ವಿಧಾನಸಭೆ ಉಪಚುನಾವಣೆ ನಡೆಯುತ್ತಿರುವ 15 ಕ್ಷೇತ್ರಗಳಲ್ಲಿ ಬೆಳಿಗ್ಗೆ ನೀರಸ ಪ್ರತಿಕ್ರಿಯೆ ಕಂಡುಬಂದಿದ್ದರೂ ಮಧ್ಯಾಹ್ನ ಕಳೆಯುತ್ತಿದ್ದಂತೆ ಮತದಾನ ತುಸು ಬಿರುಸಿನಿಂದ ಕೂಡಿತ್ತು.

ಮಧ್ಯಾಹ್ನ 3ರ ವೇಳೆಗೆಎಲ್ಲಾ 15 ಕ್ಷೇತ್ರಗಳಲ್ಲಿ ಸರಾಸರಿ ಶೇ 46.62ರಷ್ಟು ಮತದಾನ ನಡೆದಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಅಥಣಿ ವಿಧಾನಸಭಾ ಕ್ಷೇತ್ರ ಶೇ.56.05, ಕಾಗವಾಡ ವಿಧಾನಸಭಾ ಕ್ಷೇತ್ರದಲ್ಲಿ ಶೇ. 51.41, ಗೋಕಾಕ್ ವಿಧಾನಸಭಾ ಕ್ಷೇತ್ರದಲ್ಲಿ ಶೇ. 53.30, ಯಲ್ಲಾಪುರ ವಿಧಾನಸಭಾ ಕ್ಷೇತ್ರಶೇ. 56.21, ಹಿರೇಕೆರೂರು ವಿಧಾನಸಭಾ ಕ್ಷೇತ್ರ ಶೇ. 56.60, ರಾಣಿಬೆನ್ನೂರು ವಿಧಾನಸಭಾಕ್ಷೇತ್ರ ಶೇ. 53.50, ವಿಜಯನಗರ ವಿಧಾನಸಭಾಕ್ಷೇತ್ರಶೇ. 47.38, ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರ ಶೇ.60.43, ಕೆ.ಆರ್.ಪುರ ವಿಧಾನಸಭಾ ಕ್ಷೇತ್ರ ಶೇ. 29.25, ಯಶವಂತಪುರ ವಿಧಾನಸಭಾ ಕ್ಷೇತ್ರ ಶೇ. 38.83, ಮಹಾಲಕ್ಷ್ಮಿ ಲೇ ಔಟ್ ವಿಧಾನಸಭಾ ಕ್ಷೇತ್ರ ಶೇ.30.73, ಶಿವಾಜಿನಗರ ವಿಧಾನಸಭಾ ಕ್ಷೇತ್ರ ಶೇ. 32.72, ಹೊಸಕೋಟೆ ವಿಧಾನಸಭಾ ಕ್ಷೇತ್ರ ಶೇ 54.12, ಕೆ.ಆರ್.ಪೇಟೆ ವಿಧಾನಸಭಾ ಕ್ಷೇತ್ರ ಶೇ 59.86, ಹುಣಸೂರು ವಿಧಾನಸಭಾ ಕ್ಷೇತ್ರ ಶೇ 57.44 ರಷ್ಟು ಮತದಾನ ನಡೆದಿದೆ.

ಬೆಳಿಗ್ಗೆ 9 ಗಂಟೆಯಿಂದ ಆರಂಭವಾಗಿರುವ ಮತದಾನ ಪ್ರಕ್ರಿಯೆಯಲ್ಲಿ ಮತದಾರರು ನೀರಸ ಪ್ರತಿಕ್ರಿಯೆ ತೋರಿದ್ದರು. ಬೆಳಿಗ್ಗೆ 11 ಗಂಟೆಯಿಂದಮತದಾರರುಮತಗಟ್ಟೆಗೆ ಬರಲಾರಂಭಿಸಿದ ಮಧ್ಯಾಹ್ನ 1 ಗಂಟೆ ವೇಳೆಗೆ ಮತಗಟ್ಟೆಗೆ ಹೆಚ್ಚಿನ ಸಂಖ್ಯೆಯಲ್ಲಿ ಬಂದ ಕಾರಣ ಮತದಾನ ಪ್ರಮಾಣ ಸಮಾಧಾನಕರ ಸ್ಥಿತಿಗೆ ತಲುಪಿದೆ.

ಎಂದಿನಂತೆ ಬೆಂಗಳೂರಿನ ಕೆ.ಆರ್.ಪುರಂ, ಯಶವಂತಪುರ, ಮಹಾಲಕ್ಷ್ಮಿ ಲೇ ಔಟ್, ಶಿವಾಜಿನಗರ ಕ್ಷೇತ್ರಗಳಲ್ಲಿ ಕಡಿಮೆ ಪ್ರಮಾಣದ ಮತದಾನ ನಡೆದಿದೆ. ಹೊಸಕೋಟೆಯಲ್ಲಿ ಶೇ. 54 ರಷ್ಟು ಮತದಾನವಾಗಿದೆ.

ಮಧ್ಯಾಹ್ನದ ವೇಳೆಗೆ ಅತಿ ಕಡಿಮೆಮತದಾನವಾಗಿರುವ ಕ್ಷೇತ್ರ ಎಂದರೆ ಕೆ.ಆರ್.ಪುರಂವಿಧಾನಸಭಾ ಕ್ಷೇತ್ರವಾಗಿದ್ದು, ಈ ಕ್ಷೇತ್ರದಲ್ಲಿ ಜನರು ಮತದಾನಕ್ಕೆ ಬರುವುದು ಕಡಿಮೆಯಾಗಿದೆ. ಈ ಕ್ಷೇತ್ರದಲ್ಲಿ ಶೇ.29.25ರಷ್ಟು ಮತದಾನವಾಗಿದೆ. ಅತಿ ಹೆಚ್ಚು ಮತದಾನ ನಡೆದಿರುವ ಕ್ಷೇತ್ರ ಎಂದರೆ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರವಾಗಿದ್ದು, ಈ ಕ್ಷೇತ್ರದಲ್ಲಿ ಶೇ. 60.43 ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗದ ಪ್ರಕಟಣೆ ತಿಳಿಸಿದೆ.ಅಲ್ಲಲ್ಲಿ ಸಣ್ಣ ಪುಟ್ಟ ಘಟನೆಗಳನ್ನು ಹೊರತುಪಡಿಸಿ ಮತದಾನ ಶಾಂತಿಯುತವಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.