ಬೆಳಗಾವಿ:ಜಿಲ್ಲೆಯ ಗೋಕಾಕ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದರಮೇಶ ಜಾರಕಿಹೊಳಿ ಸೋದರ ಲಖನ್ ಜಾರಕಿಹೊಳಿಯನ್ನು ಹಿಂದಿಕ್ಕಿಗೆಲುವಿನ ನಗೆ ಬೀರಿದ್ದಾರೆ.

ಅಂತಿಮ ಸುತ್ತಿನ ಮತ ಎಣಿಕೆ ಮುಗಿದಿದ್ದುರಮೇಶ ಜಾರಕಿಹೊಳಿ ಅವರು 29006 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ ಎಂದು ಚುನಾವಣಾ ಆಯೋಗ ಪ್ರಕಟಿಸಿದೆ.ಕಾಂಗ್ರೆಸ್‌ನಿಂದ ಕಣಕ್ಕಿಳಿದಿದ್ದ ಲಖನ್ ಜಾರಕಿಹೊಳಿ ಅವರು ಸೋಲನುಭವಿಸಿದ್ದಾರೆ.ಜೆಡಿಎಸ್‌ನ ಅಶೋಕ ಪೂಜಾರಿ ಮೂರನೆ ಸ್ಥಾನಕ್ಕೆ ಇಳಿದಿದ್ದಾರೆ.

ಕಾಂಗ್ರೆಸ್–ಜೆಡಿಎಸ್ ಸಮ್ಮಿಶ್ರ ಸರ್ಕಾರ ಪತನಗೊಳಿಸುವಲ್ಲಿ ಮುಂಚೂಣಿಯಲ್ಲಿದ್ದ ಅನರ್ಹ ಶಾಸಕ ರಮೇಶ ಜಾರಕಿಹೊಳಿ ಸ್ಪರ್ಧೆಯಿಂದಾಗಿ ಗೋಕಾಕ ಉಪ ಚುನಾವಣಾ ಕಣ ರಾಜ್ಯದ ಗಮನ ಸೆಳೆದಿತ್ತು. ಇಲ್ಲಿ ರಮೇಶ್ ಅವರ ಸಹೋದರ ಲಖನ್ ಅವರನ್ನು ಕಾಂಗ್ರೆಸ್ ಕಣಕ್ಕಿಳಿಸಿತ್ತು.

ಇದನ್ನೂ ಓದಿ:ಉಪಚುನಾವಣೆ ಫಲಿತಾಂಶ: ಇಲ್ಲಿದೆ ಮುನ್ನಡೆ, ಗೆದ್ದವರು, ಸೋತವರ ವಿವರ

ಪಕ್ಷ, ಸಿದ್ಧಾಂತ, ಸಂಘಟನೆಗಿಂತಲೂ ‘ಜಾರಕಿಹೊಳಿ’ ಕುಟುಂಬ ಕೇಂದ್ರಿತ ರಾಜಕಾರಣವಿರುವ ಗೋಕಾಕದಲ್ಲಿಕಳೆದ ವರ್ಷ ನಡೆದಿದ್ದ ವಿಧಾನಸಭಾ ಚುನಾವಣೆಗೆ ಹೋಲಿಸಿದರೆ ಈ ಬಾರಿಯಉಪಚುನಾವಣೆಯಲ್ಲಿ ಶೇ 1.31ರಷ್ಟು (ಶೇ 73.08) ಹೆಚ್ಚು ಮತದಾನವಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.