ಬೆಂಗಳೂರು: ನಾಮಪತ್ರ ವಾಪಸ್ ಪಡೆಯುವ ಅವಧಿ ಬುಧವಾರ ಮುಕ್ತಾಯವಾಗಿದ್ದು, ಅಂತಿಮವಾಗಿ ಉಳಿದ ಅಭ್ಯರ್ಥಿಗಳ ಸ್ಪಷ್ಟ ಚಿತ್ರಣದೊಂದಿಗೆ ಮೂರೂ ಕ್ಷೇತ್ರಗಳ ಹಣಾಹಣಿಗೆ ಉಪ ಚುನಾವಣಾ ಕಣ ಸಜ್ಜುಗೊಂಡಿದೆ.

ಶಿಗ್ಗಾವಿ ಕ್ಷೇತ್ರದಲ್ಲಿ ಮಾಜಿ ಶಾಸಕ ಸೈಯದ್ ಅಜ್ಜಂಪೀರ್ ಖಾದ್ರಿ ನಾಮಪತ್ರ ಹಿಂಪಡೆಯುವ ಮೂಲಕ ಕಾಂಗ್ರೆಸ್ ವಿರುದ್ಧದ ಬಂಡಾಯ ಶಮನವಾಗಿದೆ. ಬೆಂಗಳೂರಿನಿಂದ ಮಂಗಳವಾರ ರಾತ್ರಿ ಹುಬ್ಬಳ್ಳಿಗೆ ಬಂದಿದ್ದ ಖಾದ್ರಿ, ಸಚಿವರಾದ ಜಮೀರ್ ಅಹ್ಮದ್ ಖಾನ್ ಹಾಗೂ ಶಿವಾನಂದ ಪಾಟೀಲ ಜೊತೆಯಲ್ಲಿ ಬುಧವಾರ ಬೆಳಿಗ್ಗೆ ಚುನಾವಣಾಧಿಕಾರಿ ಕಚೇರಿಗೆ ಬಂದು ನಾಮಪತ್ರ ವಾಪಸ್ ಪಡೆದರು.

ಸಂಡೂರಿನಲ್ಲಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಎನ್. ವೆಂಕಣ್ಣ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದರು. ಕಾಂಗ್ರೆಸ್ ನಾಯಕರ ಮನವಿಗೆ ಮಣಿಯದ ಅವರು, ನಾಮಪತ್ರ ಹಿಂಪಡೆಯದೇ ಕಣದಲ್ಲಿ ಉಳಿದಿದ್ದಾರೆ. ಚನ್ನಪಟ್ಟಣದಲ್ಲಿ ಏಳು ಪಕ್ಷೇತರ ಅಭ್ಯರ್ಥಿಗಳು ಬುಧವಾರ ನಾಮಪತ್ರ ಹಿಂಪಡೆದಿದ್ದಾರೆ.

ಶಿಗ್ಗಾವಿಯಲ್ಲಿ ಕಾಂಗ್ರೆಸ್ನ ಯಾಸೀರ್ ಅಹ್ಮದ್ ಖಾನ್ ಪಠಾಣ, ಮೈತ್ರಿ ಕೂಟದ ಅಭ್ಯರ್ಥಿ ಭರತ್ ಬೊಮ್ಮಾಯಿ ಪರಸ್ಪರ ಸ್ಪರ್ಧೆಗೆ ಇಳಿದಿದ್ದಾರೆ. ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಅಭ್ಯರ್ಥಿ ರವಿಕೃಷ್ಣಾ ರೆಡ್ಡಿ ಕಣದಲ್ಲಿದ್ದಾರೆ.

ಚನ್ನಪಟ್ಟಣದಲ್ಲಿ ಕಾಂಗ್ರೆಸ್ನಿಂದ ಸಿ.ಪಿ. ಯೋಗೇಶ್ವರ್ ಹಾಗೂ ಜೆಡಿಎಸ್ ಅಭ್ಯರ್ಥಿ ನಿಖಿಲ್, ಸಂಡೂರಿನಲ್ಲಿ ಕಾಂಗ್ರೆಸ್ನ ಅನ್ನಪೂರ್ಣಾ ತುಕಾರಾಂ ಹಾಗೂ ಬಿಜೆಪಿಯ ಬಂಗಾರು ಹನುಮಂತು ಮಧ್ಯೆ ನೇರ ಹಣಾಹಣಿ ಏರ್ಪಟ್ಟಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.