ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ ಮಾಡಿ ಭಾನುವಾರ ಮಧ್ಯ ರಾತ್ರಿ ಅಧಿಸೂಚನೆ ಹೊರಡಿಸಲಾಗಿದೆ.

ಮುಖ್ಯಮಂತ್ರಿ ಕಳುಹಿಸಿದ್ದ ಪಟ್ಟಿಗೆ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಅಂಕಿತ ಹಾಕಿದ ತಕ್ಷಣವೇ ರಾಜ್ಯ ಸರ್ಕಾರ ರಾಜ್ಯಪತ್ರ ಹೊರಡಿಸಿದೆ.

ಸಾರಿಗೆ ಖಾತೆ ಹಂಚಿಕೆ ಮಾಡಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದ ರಾಮಲಿಂಗಾರೆಡ್ಡಿ ಅವರಿಗೆ ಸಾರಿಗೆ ಖಾತೆಯ ಜೊತೆಗೆ ಹೆಚ್ಚುವರಿಯಾಗಿ ಮುಜರಾಯಿ ಖಾತೆಯನ್ನೂ ನೀಡಲಾಗಿದೆ.

ರಾಮಲಿಂಗಾರೆಡ್ಡಿ ಅವರು ಬೆಂಗಳೂರು ನಗರ ಅಭಿವೃದ್ಧಿ ಅಥವಾ ಬೇರೆ ಯಾವುದಾದರೂ ಪ್ರಮುಖ ಖಾತೆ ನೀಡುವಂತೆ ಅವರು ಬೇಡಿಕೆ ಇಟ್ಟಿದ್ದರು. ತಮಗಿಂತ ಕಿರಿಯರಿಗೆ ಪ್ರಮುಖ ಖಾತೆ ಹಂಚಿಕೆ ಮಾಡಲಾಗಿದೆ ಎಂದೂ ಅಸಮಾಧಾನ ವ್ಯಕ್ತಪಡಿಸಿದ್ದರು. ಮುನಿಸಿಕೊಂಡಿದ್ದ ಅವರ ಮನೆಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಸಂಸದ ಡಿ.ಕೆ. ಸುರೇಶ್ ಭಾನುವಾರ ತೆರಳಿ ಸಮಾಧಾನಪಡಿಸಿದ್ದರು.

ರಾಜ್ಯದಲ್ಲಿ ಪೂರ್ಣ ಸಚಿವ ಸಂಪುಟದ ಸರ್ಕಾರ ಅಸ್ತಿತ್ವಕ್ಕೆ ಬಂದಿದ್ದರೂ ಹೊಸ ಸಚಿವರಿಗೆ ಖಾತೆ ಹಂಚಿಕೆಯನ್ನು ಅಂತಿಮಗೊಳಿಸಲು ಭಾನುವಾರ ಮಧ್ಯರಾತ್ರಿವರೆಗೆ ಸಾಧ್ಯವಾಗಿರಲಿಲ್ಲ.

ಸಚಿವರಿಗೆ ಖಾತೆ ಹಂಚಿಕೆ ಮಾಡಲು ಪಟ್ಟಿಯನ್ನು ಅಂತಿಮಗೊಳಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಲವು ಸಚಿವರು ‘ಮಹತ್ವದ’ ಖಾತೆಗಳಿಗೆ ಪಟ್ಟುಹಿಡಿದಿದ್ದ ಕಾರಣದಿಂದ ಅದನ್ನು ತಡೆಹಿಡಿದಿದ್ದರು.

ಶನಿವಾರವೇ ಖಾತೆ ಹಂಚಿಕೆ ಪಟ್ಟಿ ಸಿದ್ಧವಾಗಿತ್ತು. ರಾಜ್ಯಪಾಲರ ಅನುಮೋದನೆಗೆ ಕಳುಹಿಸಲು ತಯಾರಿಯೂ ನಡೆದಿತ್ತು. ಹಂಚಿಕೆ ಮಾಡಲಾಗಿದ್ದ ಖಾತೆಗೆ ಕೆಲವು ಸಚಿವರು ಅಸಮಾಧಾನ ವ್ಯಕ್ತಪಡಿಸಿದ ಕಾರಣ, ಪಟ್ಟಿಯಲ್ಲಿ ಸಣ್ಣಪುಟ್ಟ ಬದಲಾವಣೆ ಮಾಡಲು ಮುಖ್ಯಮಂತ್ರಿ ಮುಂದಾಗಿದ್ದರು.

‘ಖಾತೆ ಹಂಚಿಕೆ ಪಟ್ಟಿಯನ್ನು ಶನಿವಾರ ರಾತ್ರಿ 10 ಗಂಟೆಗೆ ರಾಜಭವನಕ್ಕೆ ಕಳುಹಿಸಲು ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಆದರೆ, ಆ ಪಟ್ಟಿಯನ್ನು ತಡೆಹಿಡಿಯುವಂತೆ ಮುಖ್ಯಮಂತ್ರಿ ಕಚೇರಿಯಿಂದ ಸೂಚನೆ ಬಂತು’ ಎಂದು ಮೂಲಗಳು ತಿಳಿಸಿವೆ.

ಈ ಹಿಂದೆ ಗೃಹ ಖಾತೆ ನೀಡಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದ ಜಿ.ಪರಮೇಶ್ವರ ಅವರ ಖಾತೆಯಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. ಪರಮೇಶ್ವರ ಅವರು ಕಂದಾಯ ಇಲಾಖೆ ಮೇಲೆ ಕಣ್ಣಿಟ್ಟಿದ್ದರು ಎನ್ನಲಾಗಿತ್ತು.

ಸಮಾಜ ಕಲ್ಯಾಣ ಅಥವಾ ಕಂದಾಯ ಖಾತೆ ಬಗ್ಗೆ ಒಲವು ಹೊಂದಿದ್ದರೆನ್ನಲಾದ ಕೆ.ಎಚ್.ಮುನಿಯಪ್ಪ ಅವರಿಗೆ ಆಹಾರ ಮತ್ತು ನಾಗರಿಕ ಸರಬರಾಜು ಖಾತೆ ಜೊತೆಗೆ ಗ್ರಾಹಕ ವ್ಯವಹಾರಗಳ ಖಾತೆ ಜವಾಬ್ದಾರಿ ವಹಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.