ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಇದೇ 5ರಂದು (ಸೋಮವಾರ) ದೆಹಲಿ ಪ್ರವಾಸ ಕೈಗೊಂಡಿದ್ದು, 6 ರಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಲಿದ್ದಾರೆ.

ಮಂಗಳವಾರ ಪ್ರಧಾನಿ ಮೋದಿ ಅವರನ್ನು ಭೇಟಿಯಾಗಲಿರುವ ಯಡಿಯೂರಪ್ಪ ಅವರು, ಅಂದೇ ಕರ್ನಾಟಕದ ಸಂಸದರು, ಕೇಂದ್ರ ಸಚಿವರ ಸಭೆ ನಡೆಸಲಿದ್ದಾರೆ. 7ರಂದು ಕೇಂದ್ರ ಸಚಿವರನ್ನು ಭೇಟಿಯಾಗಲಿದ್ದಾರೆ.

ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿ (ಜುಲೈ 26) ವಾರ ಕಳೆದರೂಇನ್ನೂ ಮಂತ್ರಿ ಮಂಡಲ ರಚನೆ ಮಾಡಿಲ್ಲ. ಹೀಗಾಗಿ ಬಿಜೆಪಿ ಸರ್ಕಾರ ಭಾರಿ ಟೀಕೆಗೆ ಗುರಿಯಾಗಿದೆ. ಹೀಗಿರುವಾಗಲೇ ಯಡಿಯೂರಪ್ಪ ಅವರು ದೆಹಲಿಗೆ ಪ್ರಯಾಣ ಬೆಳೆಸುತ್ತಿದ್ದು ಬಹುತೇಕ ಆ.6 ಅಥವಾ 7ರಂದು ಮಂತ್ರಿಗಳ ಪಟ್ಟಿ ಸಿದ್ಧವಾಗುವ ಸಾಧ್ಯತೆಗಳಿವೆ.

ಅದರೊಂದಿಗೆ, ಮಂತ್ರಿ ಮಂಡಲ ರಚನೆ ಪ್ರಹಸನ ಇನ್ನೂ ಒಂದು ವಾರ ನಡೆಯುವ ಸಾಧ್ಯತೆಗಳು ನಿಚ್ಚಳವಾಗಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.