ಅರೆಸ್ಟ್ ವಾರೆಂಟ್ ಬಂದಿದ್ದರೂ ಅದಾನಿಯನ್ನು ಏಕೆ ಬಂಧಿಸುತ್ತಿಲ್ಲ? ಅವರನ್ನು ರಕ್ಷಿಸುತ್ತಿರುವವರು ಯಾರು? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಳಿದರು. ಮೈಸೂರಿನಲ್ಲಿ ಶುಕ್ರವಾರ ಮಾತನಾಡಿದ ಅವರು, ' ಅದಾನಿಯನ್ನು ತಕ್ಷಣ ಬಂಧಿಸಬೇಕು. ತಪ್ಪಿಸಿಕೊಳ್ಳಲು ಬಿಡಬಾರದು' ಎಂದು ಆಗ್ರಹಿಸಿದರು.

'ಅದಾನಿಯಿಂದ ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತದ ಘನತೆ ಪದೇ ಪದೇ ಹರಾಜಾಗುತ್ತಿದೆಯಲ್ಲವೇ' ಎನ್ನುವ ಮಾಧ್ಯಮದವರ ಪ್ರಶ್ನೆಗೆ, ಅದಾನಿಗೆ ರಕ್ಷಣೆ ಕೊಡುತ್ತಿರುವವರು ಯಾರು ಎನ್ನುವುದು ದೇಶಕ್ಕೇ ಗೊತ್ತಿದೆ. ನಿಮಗೆ ಗೊತ್ತಿಲ್ವಾ? ಈ ಸತ್ಯವನ್ನು ಮಾಧ್ಯಮಗಳು ದೇಶದ ಜನರಿಗೆ ಏಕೆ ತೋರಿಸುತ್ತಿಲ್ಲ ಎಂದು ಪ್ರಶ್ನಿಸಿದರು.
.ಲಂಚ, ವಂಚನೆ ಪ್ರಕರಣ: ಅದಾನಿ ವಿರುದ್ಧ ಬಂಧನ ವಾರೆಂಟ್ ಹೊರಡಿಸಿದ ಅಮೆರಿಕ ನ್ಯಾಯಾಲಯ.VIDEO | ತಕ್ಷಣವೇ ಅದಾನಿ ಬಂಧಿಸಿ: ರಾಹುಲ್ ಗಾಂಧಿ ಒತ್ತಾಯ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.