ಬೆಂಗಳೂರು: ಹಿರಿಯ ರಾಜಕೀಯ ಮುತ್ಸದ್ದಿ ಕೇರಳ ರಾಜ್ಯದ ಮಾಜಿ ಮುಖ್ಯಮಂತ್ರಿ ಉಮ್ಮನ್ ಚಾಂಡಿ (79) ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ನನಗೆ ಅತ್ಯಂತ ಆತ್ಮೀಯರಾಗಿದ್ದ ಉಮ್ಮನ್ ಚಾಂಡಿಯವರ ನಿಧನದ ಸುದ್ದಿ ಆಘಾತಕಾರಿ. ಕೇರಳ ರಾಜ್ಯವನ್ನು ಮಾನವ ಅಭಿವೃದ್ಧಿಯ ಸೂಚ್ಯಂಕಗಳಲ್ಲಿ ಉನ್ನತ ಸ್ಥಾನದಲ್ಲಿ ಇರಿಸಲು ಕಾರಣರಾದ ಮುಖ್ಯಮಂತ್ರಿಗಳಲ್ಲಿ ಉಮ್ಮನ್ ಚಾಂಡಿ ಕೂಡ ಒಬ್ಬರಾಗಿದ್ದರು. ಎರಡು ಬಾರಿ ಕೇರಳ ರಾಜ್ಯದ ಮುಖ್ಯಮಂತ್ರಿಗಳಾಗಿ ಅಪಾರ ಸಾಧನೆ ಮಾಡಿದವರಾಗಿದ್ದರು.

ಇದನ್ನೂ ಓದಿ: ಕೇರಳ | ಮಾಜಿ ಮುಖ್ಯಮಂತ್ರಿ ಉಮ್ಮನ್ ಚಾಂಡಿ ನಿಧನ

2004 ರಿಂದ 2006 ಮತ್ತು 2011 ರಿಂದ 2016 ರವರೆಗೆ ಕೇರಳದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು. ಎಐಸಿಸಿ ಪ್ರಧಾನ ಕಾರ್ಯದರ್ಶಿಯಾಗಿ, ರಾಜ್ಯಪಾಲರಾಗಿ, ಕೇರಳ ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿ ನಿರಂತರವಾಗಿ ಸಂವಿಧಾನದ ಆಶಯಗಳ, ಮೌಲ್ಯಗಳ ರಕ್ಷಣೆಗೆ ಶ್ರಮಿಸಿ ಹೋರಾಟ ರಾಜಕಾರಣದ ಪರಂಪರೆಯನ್ನು ಪರಿಣಾಮಕಾರಿಯಾಗಿ ಮುನ್ನಡೆಸುತ್ತಿದ್ದರು.

1970 ರಿಂದ ಕೇರಳ ರಾಜ್ಯ ವಿಧಾನಸಭೆಗೆ ನಿರಂತರವಾಗಿ ಆಯ್ಕೆಯಾಗುತ್ತಾ ಅತ್ಯಂತ ದೀರ್ಘಾವಧಿ ಶಾಸಕರಾಗಿ ಪುತ್ತುಪ್ಪಲ್ಲಿ ಕ್ಷೇತ್ರವನ್ನು ಪ್ರತಿನಿಧಿಸುತ್ತಾ ಬಂದಿದ್ದರು. ವಿಶ್ವಸಂಸ್ಥೆಯಿಂದ ಸಾರ್ವಜನಿಕ ಸೇವೆಗಾಗಿ ಪ್ರಶಸ್ತಿಯನ್ನು ಗಳಿಸಿದ ಏಕೈಕ ಭಾರತೀಯ ಮುಖ್ಯಮಂತ್ರಿ ಎನ್ನುವ ಹೆಗ್ಗಳಿಕೆಯನ್ನೂ ಗಳಿಸಿದ್ದರು.

ಅವರು ಮುಖ್ಯಮಂತ್ರಿ ಆಗಿದ್ದ ಮತ್ತು ನಾನು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಹಲವು ಬಾರಿ ಭೇಟಿಯಾಗಿದ್ದೆವು. ಅಭಿವೃದ್ಧಿ ವಿಚಾರದಲ್ಲಿ ಅವರದೇ ಆದ ಸ್ಪಷ್ಟ ತಿಳಿವಳಿಕೆ ಮತ್ತು ಮಾದರಿಗಳನ್ನು ಹೊಂದಿದ್ದರು. ನಾನು ಮೊದಲ ಬಾರಿ ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಜಾರಿ ಮಾಡಿದ್ದ ಅನ್ನಭಾಗ್ಯ ಸೇರಿದಂತೆ ಹಲವು ಯೋಜನೆಗಳನ್ನು ಅಪಾರವಾಗಿ ಶ್ಲಾಘಿಸಿದ್ದರು. ಬಡವರ ಮತ್ತು ಮಧ್ಯಮ ವರ್ಗದವರ ಬದುಕನ್ನು ಉನ್ನತೀಕರಿಸುವ ಸ್ಪಷ್ಟ ಗುರಿ ಮತ್ತು ಮಾರ್ಗ ನಾವು ಜಾರಿ ಮಾಡಿರುವ ಕಾರ್ಯಕ್ರಮಗಳಲ್ಲಿ, ನಾನು ಮಂಡಿಸಿದ ಆಯವ್ಯಯಗಳಲ್ಲಿ ಇದೆ ಎಂದು ಪತ್ರ ಬರೆದು ಮೆಚ್ಚುಗೆ ಸೂಚಿಸಿದ್ದರು.

ಅವರ ನಿಧನ ಅಭಿವೃದ್ಧಿ ಮತ್ತು ಜನಪರ ರಾಜಕಾರಣಕ್ಕೆ, ಕೇರಳ ರಾಜ್ಯಕ್ಕೆ, ಭಾರತೀಯ ರಾಜಕಾರಣಕ್ಕೆ ಹಾಗೂ ನನಗೆ ವೈಯುಕ್ತಿಕವಾಗಿ ತುಂಬಲಾರದ ನಷ್ಟ.

ಮೌಲ್ಯಯುತ ರಾಜಕಾರಣದ ಹೆಜ್ಜೆಗುರುತನ್ನು ಉಳಿಸಿ ಹೋಗಿರುವ ಉಮ್ಮನ್ ಚಾಂಡಿಯವರ ಅಗಲಿಕೆಯನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಕುಟುಂಬಕ್ಕೆ ಮತ್ತು ಅಪಾರ ಬಂಧು ಮಿತ್ರರಿಗೆ ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.