ಬೆಂಗಳೂರು: ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿರುವವರಿಗೆ ಖಾತೆ ಹಂಚಿಕೆ ಮಾಡಲಾಗಿದೆ ಎಂದು ನಕಲಿ ಪಟ್ಟಿ ತಯಾರಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಹರಡಲಾಗಿದೆ ಎಂದು ಕಾಂಗ್ರೆಸ್ ಕಿಡಿಕಾರಿದೆ.

ರಾಜ್ಯ ಸರ್ಕಾರದ ಸಚಿವ ಸಂಪುಟಕ್ಕೆ ಹೊಸದಾಗಿ ಸೇರ್ಪಡೆಯಾಗಿರುವ 24 ನಾಯಕರು ಇಂದು ಪ್ರಮಾಣ ಸ್ವೀಕರಿಸಿದ್ದಾರೆ. ಇದರೊಂದಿಗೆ ಸಚಿವ ಸಂಪುಟ ಸಂಪೂರ್ಣ ಭರ್ತಿಯಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಒಟ್ಟು 34 ಸಚಿವರು ಸಂಪುಟದಲ್ಲಿದ್ದಾರೆ. ಈ ಎಲ್ಲರಿಗೂ ಖಾತೆ ಹಂಚಿಕೆ ಮಾಡಲಾಗಿದೆ ಎಂಬ ಪಟ್ಟಿಯೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.

ಈ ಬಗ್ಗೆ ಸ್ಪಷ್ಟನೆ ನೀಡಿರುವ ಕಾಂಗ್ರೆಸ್, 'ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಕೆಲವು ಮಾಧ್ಯಮಗಳಲ್ಲಿ ಖಾತೆ ಹಂಚಿಕೆಯಾಗಿರುವ ಬಗ್ಗೆ ನಕಲಿ ಪಟ್ಟಿ ವೈರಲ್ ಆಗಿದೆ. ಇನ್ನೂ ಸಹ ಖಾತೆ ಹಂಚಿಕೆಯಾಗಿರುವುದಿಲ್ಲ. ಯಾರೂ ಊಹಾಪೋಹಗಳಿಗೆ ಕಿವಿಗೊಡಬೇಡಿ. ನಕಲಿ ಸುದ್ದಿಗಳನ್ನು ಹಂಚಬೇಡಿ. ಸರ್ಕಾರ ಅಧಿಕೃತವಾಗಿ ಖಾತೆ ಹಂಚಿಕೆಯ ಪಟ್ಟಿಯನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಿದೆ' ಎಂದು ಮನವಿ ಮಾಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.