ಬೆಂಗಳೂರು: ರಾಜ್ಯ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಒಂದಾದ ‘ಶಕ್ತಿ’ ಯೋಜನೆಯನ್ನು ಮರುಪರಿಶೀಲನೆಗೆ ಒಳಪಡಿಸುವ ಸುಳಿವನ್ನು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬುಧವಾರ ನೀಡಿದರು.

ವಿಧಾನಸೌಧದ ಮುಂಭಾಗ ಐರಾವತ ಕ್ಲಬ್ಕ್ಲಾಸ್–2.0 ನೂತನ ಬಸ್ಗಳನ್ನು ಸಾರ್ವಜನಿಕ ಸೇವೆಗೆ ಬಿಡುಗಡೆ ಮಾಡಿದ ನಂತರ ಮಾತನಾಡಿದ ಅವರು, ‘ಶಕ್ತಿ ಯೋಜನೆಯನ್ನು ಮರುಪರಿಶೀಲನೆಗೆ ಒಳಪಡಿಸಬೇಕು ಎಂದು ಹಲವು ಮಹಿಳೆಯರು ಸಾಮಾಜಿಕ ಜಾಲತಾಣ ‘ಎಕ್ಸ್ ಹಾಗೂ ಇ–ಮೇಲ್ ಮೂಲಕ ಮನವಿ ಮಾಡಿದ್ದಾರೆ’ ಎಂದು ಮಾಹಿತಿ ನೀಡಿದರು.

‘ಸಾರಿಗೆ ನಿಗಮಗಳ ಬಸ್ಗಳಲ್ಲಿ ಪ್ರಯಾಣಿಸುವಾಗ ನಾವು ಹಣ ಕೊಡಲು ಮುಂದಾದರೂ ನಿರ್ವಾಹಕರು ನಿರಾಕರಿಸುತ್ತಾರೆ; ಆರ್ಥಿಕವಾಗಿ ಅನುಕೂಲ ಸ್ಥಿತಿಯಲ್ಲಿ ಇರುವ ಕಾರಣ ಟಿಕೆಟ್ ತೆಗೆದುಕೊಳ್ಳುವ ಶಕ್ತಿಯಿದ್ದು, ನಮಗೆ ಉಚಿತ ಪ್ರಯಾಣ ಬೇಡವೆಂದು ಶೇ 5ರಿಂದ 10ರಷ್ಟು ಮಹಿಳೆಯರು ಹೇಳುತ್ತಿದ್ದಾರೆ. ಈ ಕುರಿತು ಪ್ರತ್ಯೇಕ ಸಭೆ ಕರೆದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿಯವರ ಜತೆ ಚರ್ಚಿಸಲಾಗುವುದು’ ಎಂದರು.

‘ಕೆಎಸ್ಆರ್ಟಿಸಿ ಆರಂಭವಾದಾಗ ಕೇವಲ 120 ಬಸ್ಗಳು ಇದ್ದವು, ಇಂದು 24,282 ಬಸ್ಗಳು ಇವೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ 6,200 ಬಸ್ ಖರೀದಿಗೆ ಸಮ್ಮತಿ ನೀಡಿದೆ. ಅವುಗಳಲ್ಲಿ 3,400 ಬಸ್ಗಳನ್ನು ಖರೀದಿಸಲಾಗಿದೆ. 1.80 ಕೋಟಿ ಜನರು ಪ್ರಯಾಣಿಸುತ್ತಿದ್ದಾರೆ. ಸುಮಾರು ಒಂಬತ್ತು ಸಾವಿರ ಚಾಲಕರು ಹಾಗೂ ನಿರ್ವಾಹಕರ ನೇಮಕಾತಿಗೂ ಚಾಲನೆ ನೀಡಲಾಗಿದೆ’ ಎಂದು ಉಪ ಮುಖ್ಯಮಂತ್ರಿ ಹೇಳಿದರು.

‘ಶಾಸಕನಾಗಿದ್ದ ಆರಂಭದಲ್ಲಿ ಎರಡು ಮೂರು ಬಾರಿ ಐರಾವತ ಬಸ್ನಲ್ಲಿ ಪ್ರಯಾಣ ಮಾಡಿದ್ದೆ. ಚುನಾವಣಾ ಸಮಯದಲ್ಲಿ ಪ್ರಚಾರಕ್ಕಾಗಿ ಐರಾವತ ಬಸ್ಗಳನ್ನು ಬಳಸಲಾಗುತ್ತಿತ್ತು. ಅವಕಾಶ ಸಿಕ್ಕಾಗ ಮತ್ತೆ ಪ್ರಯಾಣ ಮಾಡುವೆ’ ಎಂದರು.

ನಿಗಮದ ಬಸ್ಗಳಲ್ಲಿ ಸೇವೆ ಸಲ್ಲಿಸುವಾಗ ಅಪಘಾತಕ್ಕೆ ಒಳಗಾಗಿ ಮೃತರಾದ ಸಿಬ್ಬಂದಿಯ ಕುಟುಂಬಗಳಿಗೆ ಸಾರಿಗೆ ಸುರಕ್ಷಾ ಪರಿಹಾರ ವಿಮಾ ಯೋಜನಡಿ ತಲಾ ₹1 ಕೋಟಿ ಪರಿಹಾರದ ಚೆಕ್, ಕಾಯಿಲೆ ಮತ್ತಿತರ ಕಾರಣಗಳಿಂದ ಮೃತರಾದ ಸಿಬ್ಬಂದಿ ಕುಟುಂಬಗಳಿಗೆ ತಲಾ ₹10 ಲಕ್ಷಗಳ ಪರಿಹಾರ ಚೆಕ್ಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ವಿತರಿಸಿದರು.

ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಕೆಎಸ್ಆರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ಅನ್ಬುಕುಮಾರ್ ಉಪಸ್ಥಿತರಿದ್ದರು.

ಪ್ರಸ್ತುತ ತೆರಿಗೆ ಪಾವತಿಸುವ, ಸರ್ಕಾರಿ ಉದ್ಯೋಗದಲ್ಲಿರುವ ಮಹಿಳೆಯರೂ ಸೇರಿದಂತೆ ರಾಜ್ಯದ ಎಲ್ಲ ಮಹಿಳೆಯರಿಗೂ ಸಾರಿಗೆ ನಿಗಮದ ಎಲ್ಲ ಬಸ್ಗಳಲ್ಲೂ ಉಚಿತವಾಗಿ ಪ್ರಯಾಣಿಸಲು ಶಕ್ತಿ ಯೋಜನೆ ಅಡಿ ಅವಕಾಶ ಕಲ್ಪಿಸಲಾಗಿದೆ.

ಅಗ್ನಿ ಸುರಕ್ಷತಾ ವ್ಯವಸ್ಥೆ

ಹೊಸ ಐರಾವತ ಕ್ಲಬ್ ಕ್ಲಾಸ್–02ನಲ್ಲಿ ಅಗ್ನಿ ಅವಘಡ ತಡೆ ವ್ಯವಸ್ಥೆ ಅಳವಡಿಸಲಾಗಿದೆ. ಪ್ರಯಾಣಿಕರ ಸಾಮಗ್ರಿಗಳನ್ನು ಇಡುವ ತಳಭಾಗದ ಒಂದು ಭಾಗದಲ್ಲಿ ನೀರಿನ ಟ್ಯಾಂಕ್ ಅಳವಡಿಸಲಾಗಿದೆ. ಈ ಟ್ಯಾಂಕ್ನಿಂದ ಪ್ರತಿ ಸೀಟುಗಳ ಬಳಿಗೆ ಸ್ಟೀಲ್ಪೈಪ್ ಮೂಲಕ ನೀರು ಸರಬರಾಜಾಗುತ್ತದೆ. ಅಗ್ನಿ ಅವಘಡ ಸಂಭವಿಸಿದಾಗ ಸ್ವಯಂ ಚಾಲಿತವಾಗಿ ನೀರು ಎಲ್ಲ ಕಡೆ ಚಿಮ್ಮುತ್ತದೆ. ಇದರಿಂದ ಬಸ್ ಸುಟ್ಟು ಕರಕಲಾಗುವುದಿಲ್ಲ. ಪ್ರಯಾಣಿಕರ ಜೀವದ ರಕ್ಷಣೆಯೂ ಆಗುತ್ತದೆ. ಈಗಿರುವ ಐರಾವತ ಕ್ಲಬ್ಕ್ಲಾಸ್ಗಿಂತ ಉದ್ದವಾಗಿರುವ ಬಸ್ನ ಸೀಟುಗಳು ವಿಶಾಲವಾಗಿದ್ದು ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಳ್ಳಬಹುದು ಎಂದು ಕೆಎಸ್ಆರ್ಟಿಸಿ ಅಧಿಕಾರಿಗಳು ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.