ಬೆಂಗಳೂರಿನ ಮತ್ತೊಬ್ಬ ಸಚಿವರಾದ @MunirathnaMLA ಅವರು ಮಳೆ ಬಂದಾಗಿನಿಂದ ಮನೆಯಿಂದ ಹೊರಬಂದಂತಿಲ್ಲ!
— Karnataka Congress (@INCKarnataka) September 7, 2022
ಮುನಿರತ್ನರವರೇ, ಕಮಿಷನ್ ಇಲ್ಲದೆ ತಾವು ಹೊರಬರುವುದಿಲ್ಲವೇ?
ಜನರನ್ನು ಕಡೆಗಣಿಸಿರುವ ಇವರಿಗೆ
"ಮನಿ ಇದ್ದಲ್ಲಿ ಮಾತ್ರ ಮುನಿ" ಮಾತು ಸೂಕ್ತವಾಗುತ್ತದೆ!#MissingMinisters#BJPBrashtotsava pic.twitter.com/lelBt3vr83
ಬೆಂಗಳೂರಿನ ಜನತೆಯ ಮತಬಿಕ್ಷೆ ಪಡೆದು ಜನತೆಗೇ ದ್ರೋಹವೆಸಗುವುದು ಸರಿಯೇ ಸಚಿವರೇ?
— Karnataka Congress (@INCKarnataka) September 7, 2022
ಬೆಂಗಳೂರಿನ ಜನತೆ ಮಳೆಯಿಂದ ಕಂಗೆಟ್ಟಿರುವಾಗ 'ನಾನೇ ಸಿಎಂ' ಎನ್ನುವ ಸಚಿವರು ನಾಪತ್ತೆಯಾಗಿದ್ದಾರೆ.
"ಗಂಡಸ್ಥನವನ್ನು ಕೆಲಸದಲ್ಲಿ ತೋರಿಸಿ" ಎಂದವರೇ ಕೆಲಸ ಮಾಡದಿದ್ದರೆ ಏನೆಂದು ಕರೆಯಬೇಕು @drashwathcn ಅವರೇ?#MissingMinisters#BJPBrashtotsava pic.twitter.com/enuFxpk5tY
ಒಂದೇ ಒಂದು ಬಾರಿ ಸಿಎಂ ಜೊತೆಯಲ್ಲಿ ನೆಪಮಾತ್ರದ ಸಿಟಿ ರೌಂಡ್ಸ್ ಹೊಡೆದಿದ್ದು ಬಿಟ್ಟರೆ ಬೆಂಗಳೂರಿನ ಸಚಿವರಾದ @BABasavarajaರವರು ಮತ್ತೆ ಎಲ್ಲಿಯೂ ಕಾಣಿಸಿಕೊಳಲಿಲ್ಲ.
— Karnataka Congress (@INCKarnataka) September 7, 2022
ನೀರು ನುಗ್ಗಿದ ಮನೆಗಳಿಗೆ ಪರಿಹಾರವೇನು? ನೀರು ನಿಂತ ರಸ್ತೆಗಳಿಗೆ ಮುಕ್ತಿ ಏನು?
ಸಚಿವರು ಜನರ ಕಷ್ಟ ಆಲಿಸಲು ಹೋಗದಿರುವುದೇಕೆ?#MissingMinisters#BJPBrashtotsava pic.twitter.com/K6fHbrNHR0
ಬೆಂಗಳೂರಿನ ಜನರ ಋಣ ಹೊತ್ತಿರುವ ಸಚಿವರಾದ @GopalaiahK ಇದುವರೆಗೂ ಯಾವುದೇ ನೆರೆ ಸಂತ್ರಸ್ತ ಜನರ ಬಳಿ ಹೋಗಿದ್ದು ಎಲ್ಲೂ ಕಾಣಲಿಲ್ಲ.
— Karnataka Congress (@INCKarnataka) September 7, 2022
ಪರಿಹಾರ ಕಾರ್ಯಗಳನ್ನು ನಡೆಸಬೇಕಾದವರು ನಪತ್ತೆಯಾಗಿದ್ದೆಲ್ಲಿ?
ಸಿಎಂ ಸಚಿವರೆಲ್ಲರನ್ನೂ 'ಮಳೆಯಲಿ, ಚಳಿಯಲ್ಲಿ, ಬೆಚ್ಚಗೆ ಮಲಗಲಿ' ಎಂಬಂತೆ ಬಿಟ್ಟಿದ್ದಾರೆಯೇ?!#MissingMinisters#BJPBrashtotsava pic.twitter.com/B2gmuvoqUV
ಬೆಂಗಳೂರಲ್ಲೇ ಬೆಳೆದು, ಬೆಂಗಳೂರಲ್ಲೇ ಅಧಿಕಾರ, ಆಸ್ತಿ, ಅಂತಸ್ತು ಕಂಡುಕೊಂಡ ಸಚಿವ @VSOMANNA_BJP ಅವರು ಬೆಂಗಳೂರನ್ನೇ ಕಡೆಗಣಿಸಿದರೆ ಹೇಗೆ?
— Karnataka Congress (@INCKarnataka) September 7, 2022
ಬೆಂಗಳೂರು ಉಸ್ತುವಾರಿಗಾಗಿ ಹಂಬಲಿಸುವ ಇವರ ಮನ ಜನರ ಕಷ್ಟಕ್ಕೆ ಮಿಡಿಯದಿರುವುದೇಕೆ?
ಜನರಿಗೆ ಕಷ್ಟ ಬಂದಾಗ ಬಿಜೆಪಿಗರಿಗೆ ವಿಶ್ರಾಂತಿಯ ಸಮಯವೇ?#MissingMinisters#BJPBrashtotsava pic.twitter.com/oLWZvMq5AM
ಬೆಂಗಳೂರನ್ನು ಪ್ರತಿನಿಧಿಸುವ ಮತ್ತೊಬ್ಬ ಸಚಿವ @STSomashekarMLA ಮಳೆ ಅವಾಂತರದಿಂದ ನಲುಗಿದ ಯಾವುದೇ ಏರಿಯಾಗಳಲ್ಲಿ ಇದುವರೆಗೂ ಕಾಣಿಸಿಕೊಂಡಿಲ್ಲ.
— Karnataka Congress (@INCKarnataka) September 7, 2022
ಜನತೆ ಹುಡುಕುತ್ತಿದ್ದಾರೆ.
ಜನರ ಮನೆಯಲ್ಲಿ ಮಳೆ ನೀರು ನುಗ್ಗಿದರೆ, ಇವರ ಮನದಲ್ಲಿ ಸನ್ಮಾನದ ಆಸೆ ನುಗ್ಗಿದೆ!
ಸಚಿವರೇ ಜನರತ್ತ ನೋಡುವುದು ಯಾವಾಗ?#MissingMinisters#BJPBrashtotsava pic.twitter.com/WJ4wCN2VCS
ಸಂಸದ @Tejasvi_Surya ಅವರನ್ನು ಸಂಸದರನ್ನಾಗಿಸಿದ್ದು, ಆಡುವ ಮಕ್ಕಳನ್ನು ಶಾಲೆಗೆ ಸೇರಿಸಿದಂತಾಗಿದೆ!
— Karnataka Congress (@INCKarnataka) September 7, 2022
ಹಿಂದೆ ಕೋವಿಡ್ ಕಾಲದಲ್ಲಿ ಫುಟ್ಬಾಲ್ ಆಡಲು ಹೋಗಿದ್ದರು, ಅತಿವೃಷ್ಟಿಯ ಕಾಲದಲ್ಲಿ ದೋಸೆ ತಿನ್ನಲು ಹೋಗಿದ್ದಾರೆ.
ಕೆಲಸಕ್ಕೆ ಕರೆಯಬೇಡಿ, ದೋಸೆ ತಿನ್ನೋಕೆ ಕರೆಯೋದು ಮರೆಯಬೇಡಿ ಎಂಬುದು ಇವರ ಮನವಿ!#MissingMinisters#BJPBrashtotsava pic.twitter.com/gSoJ4eDK5s
ಬೆಂಗಳೂರಿನ ಜನರು ಕೊಟ್ಟ ಅಧಿಕಾರವನ್ನು ಅನುಭವಿಸುತ್ತಿರುವ @RAshokaBJP ಅವರು ಯಾವ ಬಡಾವಣೆ, ಗಲ್ಲಿಗಳಲ್ಲೂ ಕಾಣಿಸಿಕೊಳ್ಳಲಿಲ್ಲ, ಜನತೆಯ ನೆರವಿಗೆ ನಿಂತಿದ್ದು ಕಾಣಲಿಲ್ಲ.
— Karnataka Congress (@INCKarnataka) September 7, 2022
ಜನರಿಗೆ ಕಷ್ಟದ ಸಮಯವೆಂದರೆ ಬಿಜೆಪಿಗೆ ವಿಶ್ರಾಂತಿಯ ಸಮಯ, ಮಳೆ ಮುಗಿದ ನಂತರ ಹಿಜಾಬ್, ಹಲಾಲ್ಗಳಿಗೆ ಕ್ರಿಯಾಶೀಲರಾಗ್ತಾರೆ!#MissingMinisters#BJPBrashtotsava pic.twitter.com/aDJEgsG2XV
ಕಳೆದ ಒಂದು ವಾರದಿಂದ ಮಳೆಯಲ್ಲಿ ಜನತೆ ಮುಳುಗಲು ಶುರುವಾದಾಗಿನಿಂದ ರಾಜ್ಯದ ಗೃಹಸಚಿವರು ನೆರೆ ಪೀಡಿತ ಪ್ರದೇಶದಲ್ಲಾಗಲಿ, ಬೆಂಗಳೂರಿನಲ್ಲಾಗಲಿ, ವಿಧಾನಸೌಧದಲ್ಲಾಗಲಿ ಕಾಣಿಸಲಿಲ್ಲ.
— Karnataka Congress (@INCKarnataka) September 7, 2022
ಸ್ವಕ್ಷೇತ್ರದಲ್ಲಿ ಠಿಕಾಣಿ ಹೂಡಿದ @JnanendraAraga ಅವರು ಗೃಹಸಚಿವರಾಗಿ ಕೆಲಸ ಮಾಡಲು ಆರಂಭಿಸುವುದು ಯಾವಾಗ!?#MissingMinisters#BJPBrashtotsava pic.twitter.com/zB3SAR3s6Q
ಸಚಿವ @mla_sudhakar ಅವರು
— Karnataka Congress (@INCKarnataka) September 7, 2022
ಕೋವಿಡ್ ಕಾಲದಲ್ಲಿ ಸ್ವಿಮ್ಮಿಂಗ್ ಪೂಲ್ನಲ್ಲಿ ಸ್ವಿಮ್ಮಿಂಗ್ ಮಾಡ್ತಿದ್ರು.
ಈಗ ಬೆಂಗಳೂರು ಸ್ವಿಮ್ಮಿಂಗ್ ಪೂಲ್ ಆಗಿದೆ, ಜನತೆ ಸ್ವಿಮ್ಮಿಂಗ್ ಮಾಡುವ ಸ್ಥಿತಿ ಇದೆ, ಸಚಿವರು ನಾಪತ್ತೆಯಾಗಿದ್ದಾರೆ.
ಜನತೆಗೆ ಜಲೋತ್ಸವದ ಸಂಕಟ, ಬಿಜೆಪಿಗೆ ಜನೋತ್ಸವದ ಚೆಲ್ಲಾಟ! #MissingMinisters#BJPBarshtotsava pic.twitter.com/bLfmTrbqR6
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.