ಬೆಂಗಳೂರು: ಗೃಹಖಾತೆಯನ್ನು ಪರಮೇಶ್ವರ ಅವರು ಮರಿ ಖರ್ಗೆಗೆ ಲೀಸ್‌ಗೆ ಕೊಟ್ಟಿದ್ದಾರೆ ಎನ್ನುವ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಹೇಳಿಕೆಗೆ ಕಾಂಗ್ರೆಸ್ ಕಿಡಿಕಾರಿದೆ.

ನಳಿನ್ ಕುಮಾರ್ ಅವರನ್ನು ‘ಕಾಮಿಡಿ ಕಿಲಾಡಿ‘ ಎಂದು ಕಾಂಗ್ರೆಸ್ ಲೇವಡಿ ಮಾಡಿದೆ. ಅಲ್ಲದೇ ತಾವು ಅಧ್ಯಕ್ಷಗಿರಿಯನ್ನು ಸಂತೋಷ್ ಪಾದರಕ್ಷೆಗಳಿಗೆ ಲೀಸ್ ಕೊಟ್ಟಿದ್ದೀರಿ ಎಂದು ತಿರುಗೇಟು ನೀಡಿದೆ.

‘ಬಿಜೆಪಿಗರ ಇತ್ತೀಚಿನ ಮಾತು ಕೃತಿ ಗಮನಿಸಿದರೆ ನಮ್ಮ ಸರ್ಕಾರ ಉಚಿತ ಮಾನಸಿಕ ಚಿಕಿತ್ಸೆಯ ಯೋಜನೆಯನ್ನೂ ರೂಪಿಸಬೇಕಾದೀತು‘ ಎಂದಿರುವ ಕಾಂಗ್ರೆಸ್, ‘ಚುನಾವಣೆಯಲ್ಲಿ ಬಿಜೆಪಿಯ ಹೀನಾಯ ಸೋಲಿಗೆ ಕಾರಣನಾದ ನಾಮಕಾವಸ್ಥೆ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಕನಿಷ್ಠ ಕಾಮನ್ ಸೆನ್ಸ್ ಇಲ್ಲ, ಇನ್ನು ಸಂಸದೀಯ ನಿಯಮಗಳ ಬಗ್ಗೆ ಅರಿವಿರಲು ಹೇಗೆ ಸಾಧ್ಯ‘ ಎಂದು ಪ್ರಶ್ನಿಸಿದೆ.

'ಪ್ರಿಯಾಂಕ್ ಖರ್ಗೆ ಅವರು ಕಲಬುರಗಿಯ ಉಸ್ತುವಾರಿ ಸಚಿವರು, ಅಲ್ಲಿನ ವ್ಯವಸ್ಥೆಯನ್ನು ಸರಿಪಡಿಸುವುದು ಅವರ ಹೊಣೆಗಾರಿಕೆ. ಅಲ್ಲಿನ ಅಧಿಕಾರಿಗಳನ್ನು ಸರಿದಾರಿಗೆ ತರುವುದು ಅವರದ್ದೇ ಜವಾಬ್ದಾರಿ. ಇಷ್ಟು ಸಾಮಾನ್ಯ ತಿಳುವಳಿಕೆ ಇಲ್ಲದಿರುವುದಕ್ಕಾಗಿಯೇ ಕಟೀಲ್ ಅವರನ್ನು ಕಾಮಿಡಿ ಕಿಲಾಡಿ ಎನ್ನುವುದು‘ ಎಂದು ಕಾಂಗ್ರೆಸ್ ಛೇಡಿಸಿದೆ.

‘ಕಟೀಲ್ ಅವರೇ, ತಾವು ಅಧ್ಯಕ್ಷಗಿರಿಯನ್ನು ಬಿಎಲ್ ಸಂತೋಷ್ ಅವರ ಪಾದರಕ್ಷೆಗಳಿಗೆ ಲೀಸ್‌ಗೆ ಕೊಟ್ಟಿದ್ದೀರಿ ಎಂದ ಮಾತ್ರಕ್ಕೆ ಬೇರೆಲ್ಲರೂ ಹಾಗೆಯೇ ಎಂದು ತಿಳಿಯುವುದು ಮೂರ್ಖತನ‘ ಎಂದು ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.