ಬೆಂಗಳೂರು: ರಾಜ್ಯದಲ್ಲಿ ಮಂಗಳವಾರ 14,473 ಮಂದಿ ಕೋವಿಡ್ ಪೀಡಿತರಾಗಿರುವುದು ದೃಢಪಟ್ಟಿದೆ. ಸೋಂಕು ದೃಢ ಪ್ರಮಾಣ ಶೇ 10.30ಕ್ಕೆ ಏರಿಕೆಯಾಗಿದೆ.

ಏಳೂವರೆ ತಿಂಗಳಲ್ಲಿ ವರದಿಯಾದ ಗರಿಷ್ಠ ದೃಢ ಪ್ರಮಾಣ ಹಾಗೂ ಪ್ರಕರಣಗಳು ಇವಾಗಿವೆ. ಒಂದು ದಿನದ ಅವಧಿಯಲ್ಲಿ 1.40 ಲಕ್ಷ ಮಾದರಿಗಳನ್ನು ಪರೀಕ್ಷೆ ಮಾಡಲಾಗಿದೆ. ಈ ತಿಂಗಳು 11 ದಿನಗಳಲ್ಲಿ 70,792 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈವರೆಗೆ ವರದಿಯಾದ ಒಟ್ಟು ಪ್ರಕರಣಗಳ ಸಂಖ್ಯೆ 30.78 ಲಕ್ಷ ದಾಟಿದೆ.

ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಕೋವಿಡ್ ಪ್ರಕರಣಗಳು ಹೊಸದಾಗಿ ಪತ್ತೆಯಾಗಿವೆ. 13 ಜಿಲ್ಲೆಗಳಲ್ಲಿ ಹೊಸ ಪ್ರಕರಣಗಳ ಸಂಖ್ಯೆ ಮೂರಂಕಿಗೆ ಏರಿಕೆಯಾಗಿದೆ. 13 ಜಿಲ್ಲೆಗಳಲ್ಲಿ ಎರಡಂಕಿಯಲ್ಲಿದೆ. ಬೆಂಗಳೂರಿನಲ್ಲಿ ಪ್ರಕರಣಗಳ ಸಂಖ್ಯೆ ಮತ್ತಷ್ಟು ಹೆಚ್ಚಳವಾಗಿದ್ದು, 10,800 ಮಂದಿ ಕೋವಿಡ್ ಪೀಡಿತರಾಗಿದ್ದಾರೆ.

ದಕ್ಷಿಣ ಕನ್ನಡದಲ್ಲಿ 583, ಮೈಸೂರಿನಲ್ಲಿ 562, ತುಮಕೂರಿನಲ್ಲಿ 332, ಮಂಡ್ಯದಲ್ಲಿ 263 ಹಾಗೂ ಉಡುಪಿಯಲ್ಲಿ 250 ಪ್ರಕರಣಗಳು ವರದಿಯಾಗಿವೆ. ಉಳಿದ ಜಿಲ್ಲೆಗಳಲ್ಲಿ ಹೊಸ ಪ್ರಕರಣಗಳು 200ಕ್ಕಿಂತ ಕಡಿಮೆ ಇವೆ.

ಸೋಂಕಿತರಲ್ಲಿ 1,356 ಮಂದಿ ಚೇತರಿಸಿಕೊಂಡಿದ್ದಾರೆ. ಗುಣಮುಖರಾದವರ ಒಟ್ಟು ಸಂಖ್ಯೆ 29.66 ಲಕ್ಷ ದಾಟಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ ಮತ್ತಷ್ಟು ಹೆಚ್ಚಳವಾಗಿದ್ದು, 73,260ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ 58,917 ಸಕ್ರಿಯ ಪ್ರಕರಣಗಳಿವೆ.

ಕೋವಿಡ್ ಪೀಡಿತರಲ್ಲಿ ಬೆಂಗಳೂರಿನಲ್ಲಿ ಮೂವರು, ಕೋಲಾರ ಹಾಗೂ ಉತ್ತರ ಕನ್ನಡದಲ್ಲಿದಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಮರಣ ಪ್ರಮಾಣ ದರವು ಶೇ 0.03 ರಷ್ಟು ವರದಿಯಾಗಿದೆ. ಈವರೆಗೆ ಕೋವಿಡ್ಗೆ ಸಾವಿಗೀಡಾದವರ ಒಟ್ಟು ಸಂಖ್ಯೆ 38,379ಕ್ಕೆ ಏರಿಕೆಯಾಗಿದೆ.

ಕೊರೊನಾ ನಿಗ್ರಹಕ್ಕೆ ಸಿಎಂ ಬೊಮ್ಮಾಯಿ ಮೀಟಿಂಗ್:ಶಾಲೆ ಮುಚ್ಚುವ ತೀರ್ಮಾನ ಡಿಸಿಗಳಿಗೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.