ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಇಂದು ಬೆಳಿಗ್ಗೆ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ನಿವಾಸಕ್ಕೆ ಭೇಟಿ ನೀಡಿ, ಆಶೀರ್ವಾದ ಪಡೆದಿದ್ದಾರೆ.

ಎಸ್.ಎಂ.ಕೃಷ್ಣ ಅವರ ಮೊಮ್ಮಗ, ಕಾಫಿ ಡೇ ಮಾಲೀಕ ದಿವಂಗತ ಸಿದ್ಧಾರ್ಥ ಅವರ ಪುತ್ರ ಅಮಾರ್ತ್ಯ ಅವರೊಂದಿಗೆ ಡಿಕೆಶಿ ಮಗಳು ಐಶ್ವರ್ಯಾ 2021ರಲ್ಲಿ ಮದುವೆಯಾಗಿದ್ದರು.

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅವರು ಶನಿವಾರ ಪ್ರಮಾಣವಚನ ಸ್ವೀಕರಿಸಿದ್ದರು. ಈ ಸಮಾರಂಭದಲ್ಲಿ ಎಐಸಿಸಿ ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕಾ ಗಾಂಧಿ, ರಾಹುಲ್ ಗಾಂಧಿ ಸೇರಿದಂತೆ ಬಿಹಾರ ಸಿಎಂ ನಿತೀಶ್ ಕುಮಾರ್, ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್ ಸೇರಿದಂತೆ ಬಿಜೆಪಿಯೇತರ ಕೆಲವು ನಾಯಕರು ಭಾಗವಹಿಸಿದ್ದರು.

16ನೇ ವಿಧಾನಸಭೆಯ ಮೊದಲ ಅಧಿವೇಶನ ಇಂದಿನಿಂದ ವಿಧಾನಸೌಧದಲ್ಲಿರುವ ವಿಧಾನಸಭೆ ಸಭಾಂಗಣದಲ್ಲಿ ಸಮಾವೇಶಗೊಳ್ಳಲಿದೆ. ಕಾಂಗ್ರೆಸ್ನ ಹಿರಿಯ ಶಾಸಕ ಆರ್.ವಿ. ದೇಶಪಾಂಡೆ ಅವರನ್ನು ವಿಧಾನಸಭೆಯ ಹಂಗಾಮಿ ಸಭಾಧ್ಯಕ್ಷರನ್ನಾಗಿ ನೇಮಿಸಲಾಗಿದೆ.

‘ಸದನದಿಂದ ಸಭಾಧ್ಯಕ್ಷರು ಆಯ್ಕೆ ಆಗುವವರೆಗೆ ವಿಧಾನಸಭಾಧ್ಯಕ್ಷರ ಕರ್ತವ್ಯವನ್ನು ನಿರ್ವಹಿಸಲು ದೇಶಪಾಂಡೆ ಅವರನ್ನು ರಾಜ್ಯಪಾಲರು ನೇಮಕ ಮಾಡಿದ್ದಾರೆ’ ಎಂದು ವಿಧಾನಸಭೆ ಕಾರ್ಯದರ್ಶಿ ಎಂ.ಕೆ. ವಿಶಾಲಾಕ್ಷಿ ತಿಳಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಶನಿವಾರ ಅಸ್ತಿತ್ವಕ್ಕೆ ಬಂದ ಹೊಸ ಸರ್ಕಾರದ ಮೊದಲ ಸಚಿವ ಸಂಪುಟ ಸಭೆಯಲ್ಲಿ ಆರ್.ವಿ. ದೇಶಪಾಂಡೆ ಅವರನ್ನು ಹಂಗಾಮಿ ಸಭಾಧ್ಯಕ್ಷರನ್ನಾಗಿ ನೇಮಿಸುವಂತೆ ರಾಜ್ಯಪಾಲರಿಗೆ ಮನವಿ ಮಾಡಲು ನಿರ್ಧರಿಸಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.