ತುಮಕೂರು: ‘ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ (ಕೆಆರ್‌ಎಸ್) ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ ಮದ್ಯ ನಿಷೇಧಿಸಲಾಗುವುದು. ಪೊಲೀಸರು, ಸರ್ಕಾರಿ ನೌಕರರು ನೆಮ್ಮದಿಯಿಂದ ಕೆಲಸ ಮಾಡುವ ವ್ಯವಸ್ಥೆ ಜಾರಿಗೆ ತರಲಾಗುವುದು’ ಎಂದು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ರವಿಕೃಷ್ಣಾರೆಡ್ಡಿ ಇಲ್ಲಿ ಶುಕ್ರವಾರ ಪ್ರಕಟಿಸಿದರು.

ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ಹಮ್ಮಿಕೊಂಡಿರುವ ‘ಕರುನಾಡು ಕಟ್ಟೋಣ ಸಂಕಲ್ಪ ಯಾತ್ರೆ’ಯ ಸಮಾರೋಪವು ನಗರದಲ್ಲಿ ನಡೆಯಿತು. ಸಮಾರಂಭ ಉದ್ಘಾಟಿಸಿ ಮಾತನಾಡಿ, ‘ಮೂರು ಬಿಟ್ಟವರು ನಮ್ಮ ರಾಜ್ಯವನ್ನು ಹಿಂಡಿ ಹಿಪ್ಪೆ ಮಾಡುತ್ತಿದ್ದಾರೆ’ ಎಂದು ಹೇಳಿದರು.

ಕೆಆರ್‌ಎಸ್ ರಾಜ್ಯ ಸಂಘಟನಾ ಕಾರ್ಯದರ್ಶಿ ಜ್ಞಾನಸಿಂಧು ಸ್ವಾಮಿ, ‘ನಾಡಿನ ಜನರು ಅನೇಕ ಸಮಸ್ಯೆಗಳನ್ನು
ಎದುರಿಸುತ್ತಿದ್ದಾರೆ. ನಾಗರಿಕತೆ ಬೆಳೆಯುತ್ತಾ ಉಳ್ಳವರು ಸುಳ್ಳು, ಮೋಸಗಳನ್ನು ಕಲಿತಿದ್ದಾರೆ. ಭ್ರಷ್ಟ ಜೆಸಿಬಿ (ಜೆಡಿಎಸ್, ಕಾಂಗ್ರೆಸ್, ಬಿಜೆಪಿ) ಪಕ್ಷಗಳು ಲೂಟಿ ಮಾಡುತ್ತಿವೆ. ನಾವು ಅಧಿಕಾರಕ್ಕೆ ಬಂದರೆ ಉಚಿತವಾಗಿ ಶಿಕ್ಷಣ, ಆರೋಗ್ಯ ನೀಡಿ, ಸರ್ಕಾರಿ ಕಚೇರಿಗಳನ್ನು ಲಂಚ ಮುಕ್ತ ಮತ್ತು ಪಾರದರ್ಶಕವಾಗಿ ನಡೆಸುತ್ತೇವೆ’ ಎಂದು ತಿಳಿಸಿದರು.

ಕೆಆರ್‌ಎಸ್ ಉಪಾಧ್ಯಕ್ಷ ಲಿಂಗೇಗೌಡ, ‘ಜೆಸಿಬಿ ಪಕ್ಷಗಳು ರಾಜ್ಯವನ್ನು ವಿನಾಶದೆಡೆಗೆ ಕೊಂಡೊಯ್ಯುತ್ತಿವೆ. ಪ್ರತಿನಿತ್ಯವೂ ಹಣ, ಹೆಂಡ, ಸೀರೆ ಹಂಚುವ ಕೆಲಸದಲ್ಲಿ ತೊಡಗಿದ್ದಾರೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.