ಸೂಪರ್ ಸ್ಪೆಶಾಲಿಟಿ ಆಸ್ಪತ್ರೆಗಾಗಿ ಉತ್ತರ ಕನ್ನಡ ಜಿಲ್ಲೆಯ ಜನರು ನಡೆಸುತ್ತಿರುವ ಹೋರಾಟಕ್ಕೆ ನನ್ನ ಪರಿಪೂರ್ಣ ಬೆಂಬಲವಿದೆ & ಹೋರಾಟದಲ್ಲಿ ನಮ್ಮ ಪಕ್ಷವೂ ನಿಲ್ಲುತ್ತದೆ. ವರ್ಷಗಳ ಕಾಲದ ನ್ಯಾಯಯುತವಾದ ಈ ಬೇಡಿಕೆಯನ್ನು ರಾಜ್ಯ @BJP4Karnataka ಸರಕಾರ ಆದ್ಯತೆಯ ಮೇರೆಗೆ ಈಡೇರಿಸಬೇಕು. 1/6
ಕೆಲವೆಡೆ ಮಾತ್ರ ಸುಸಜ್ಜಿತ ಆಸ್ಪತ್ರೆಗಳಿವೆ. ಬಹುತೇಕ ಜಿಲ್ಲೆಗಳಲ್ಲಿ ಇಲ್ಲ. ತುರ್ತು ಚಿಕಿತ್ಸೆ ಬೇಕೆಂದರೆ, ಬೆಂಗಳೂರು, ಹುಬ್ಬಳ್ಳಿ, ಮಂಗಳೂರು, ಮೈಸೂರು, ಬೆಳಗಾವಿಯಂಥ ಕೆಲವಷ್ಟೇ ನಗರಗಳಲ್ಲಿ ಮಾತ್ರ ಲಭ್ಯವಿದೆ. ಜನ ಹೋಗುವುದು ಹೇಗೆ? ಆರೋಗ್ಯ ಸೌಲಭ್ಯದಲ್ಲಿ ಅಸಮಾನತೆ ರಾಜ್ಯಕ್ಕೆ ಭೂಷಣವಲ್ಲ. 3/6
ರಾಜ್ಯದಲ್ಲಿ ಇನ್ನೆಷ್ಟು ಆಂಬುಲೆನ್ಸ್ ದುರಂತಗಳು ಆಗಬೇಕು? ಇನ್ನೆಷ್ಟು ಜನರು ರಸ್ತೆಗಳ ಮೇಲೆಯೇ ಜೀವ ಕಳೆದುಕೊಳ್ಳಬೇಕು? ಶಿರೂರು ಟೋಲ್ ಬಳಿ ಸಂಭವಿಸಿದ ಭೀಕರ ಅಪಘಾತದಿಂದ ರಾಜ್ಯ @BJP4Karnataka ಸರಕಾರ ಕಣ್ತೆರೆಯಲೇಬೇಕು. 5/6
ಆರೋಗ್ಯ ಸೌಲಭ್ಯ ಕಲ್ಪಿಸುವುದರ ಜತೆಗೆ ಇರುವ ವ್ಯವಸ್ಥೆಯ ಸಮರ್ಪಕ ನಿರ್ವಹಣೆ ಸರಕಾರದ ಹೊಣೆ. ಆರೋಗ್ಯ ಎಲ್ಲರ ಹಕ್ಕು. ನಾನು ರೂಪಿಸಿರುವ #ಪಂಚರತ್ನ ಕಾರ್ಯಕ್ರಮದಲ್ಲಿ ಆರೋಗ್ಯವೂ ಪ್ರಮುಖ ಕಾರ್ಯಕ್ರಮ. ಜನತೆಗೆ ಅತ್ಯುತ್ತಮ ಆರೋಗ್ಯ ಸೌಲಭ್ಯ ಕೊಡುವುದು ನನ್ನ ಗುರಿ. 6/6