ಸೋಮವಾರ, 1 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಡಿಸಿಇಟಿ: 16,478 ವಿದ್ಯಾರ್ಥಿಗಳಿಗೆ ರ್‍ಯಾಂಕ್‌ ನಿಗದಿ

Published 29 ಜೂನ್ 2024, 15:35 IST
Last Updated 29 ಜೂನ್ 2024, 15:35 IST
ಅಕ್ಷರ ಗಾತ್ರ

ಬೆಂಗಳೂರು: ಎರಡನೇ ವರ್ಷದ ಎಂಜಿನಿಯರಿಂಗ್‌ಗೆ ಪ್ರವೇಶ ನೀಡಲು ನಡೆಸುವ (ಲ್ಯಾಟರಲ್‌ ಎಂಟ್ರಿ) ಡಿಪ್ಲೊಮಾ ಸಿಇಟಿ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಶನಿವಾರ ಪ್ರಕಟಿಸಿದೆ.

17,440 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಅವರಲ್ಲಿ 16,478 ವಿದ್ಯಾರ್ಥಿಗಳಿಗೆ ರ್‍ಯಾಂಕ್‌ ನಿಗದಿ ಮಾಡಲಾಗಿದೆ. ರಾಜ್ಯದ ವಿವಿಧ ಎಂಜಿನಿಯರಿಂಗ್‌ ಕಾಲೇಜುಗಳಲ್ಲಿ ಈ ವಿದ್ಯಾರ್ಥಿಗಳಿಗೆ 10,835 ಸೀಟುಗಳು ಲಭ್ಯವಿವೆ.

ಈ ವಿದ್ಯಾರ್ಥಿಗಳ ದಾಖಲೆ ಪರಿಶೀಲನೆ ಕಾರ್ಯ ಜುಲೈ 2ರಿಂದ 4ರವರೆಗೆ ನಡೆಯಲಿದೆ. ರ್‍ಯಾಂಕ್‌ ದೊರೆಯದೇ ಇರುವ ವಿದ್ಯಾರ್ಥಿಗಳು ತಮ್ಮ ಡಿಪ್ಲೊಮಾ ಅಂಕಗಳ ಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್‌ಸೈಟ್‌ keaugcet24@gmail.com ಗೆ ಪಿಡಿಎಫ್‌ ಸ್ವರೂಪದಲ್ಲಿ ಅಪ್‌ಲೋಡ್ ಮಾಡಬಹುದು. ಅಂತಹ ಅಭ್ಯರ್ಥಿಗಳ ಅರ್ಹತೆಯನ್ನು ಪರಿಶೀಲಿಸಿ, ರ‍್ಯಾಂಕ್‌ ನೀಡಲಾಗುವುದು ಎಂದು ಕೆಇಎ ಹೇಳಿದೆ.

ಸಿಇಟಿ: ದಾಖಲೆಗಳ ಆನ್‌ಲೈನ್‌ ಪರಿಶೀಲನೆ ಪೂರ್ಣ

ಬೆಂಗಳೂರು: ಎಂಜಿನಿಯರಿಂಗ್‌, ವೈದ್ಯಕೀಯ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳಿಗೆ ಪ್ರವೇಶ ಬಯಸಿದ ಅಭ್ಯರ್ಥಿಗಳು ಮೀಸಲಾತಿ ಬಯಸಿ ಸಲ್ಲಿಸಿದ್ದ ದಾಖಲೆಗಳ ಆನ್‌ಲೈನ್‌ ಪರಿಶೀಲನಾ ಕಾರ್ಯ ಪೂರ್ಣಗೊಂಡಿದ್ದು, ಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಿಸಿದೆ.

ಎಸ್‌ಎಟಿಎಸ್‌ ಮತ್ತು ಆರ್‌ಡಿ ಸಂಖ್ಯೆ ಆಧರಿಸಿ ಪರಿಶೀಲನೆ ಮಾಡಲಾಗಿದೆ. ಅಭ್ಯರ್ಥಿಗಳು ನಿಗದಿತ ಲಿಂಕ್‌ನಲ್ಲಿ ತಮ್ಮ ಅರ್ಜಿ ಸಂಖ್ಯೆ ಮತ್ತು ಜನ್ಮ ದಿನಾಂಕ ನಮೂದಿಸಿ, ವಿವರಗಳನ್ನು ನೋಡಬಹುದು. ಪರಿಶೀಲನಾ ಸ್ಲಿಪ್‌ ಡೌನ್‌ಲೋಡ್‌ ಮಾಡಿಕೊಳ್ಳಲು ಪ್ರಾಧಿಕಾರದ ವೆಬ್‌ಸೈಟ್‌ ಸಂಪರ್ಕವನ್ನು ಶೀಘ್ರ ಸಕ್ರಿಯಗೊಳಿಸಲಾಗುವುದು ಎಂದು ಕೆಇಎ ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT