ಆರ್.ಎಸ್.ಎಸ್ ನ ಒಬ್ಬರೂ ದೇಶಕ್ಕಾಗಿ ಹೋರಾಡಿಲ್ಲ, ಒಬ್ಬನೂ ದೇಶಕ್ಕಾಗಿ ಪ್ರಾಣಕೊಟ್ಟಿಲ್ಲ. ಮನುಷ್ಯರನ್ನು ಜಾತಿ-ಧರ್ಮದ ಹೆಸರಲ್ಲಿ ವಿಂಗಡಿಸಿದ್ದು ದೇವರು ಅಲ್ಲ: ಎಲ್ಲ ಮಾಡಿದ್ದು ಮನುಸ್ಮೃತಿ. ಆರ್.ಎಸ್.ಎಸ್ ನವರು ಮನುಸ್ಮೃತಿ ಪರವಾಗಿರುವುದರಿಂದಲೇ ನಮ್ಮ ಸಂವಿಧಾನ ವಿರೋಧಿಸುತ್ತಾರೆ.
ನಮ್ಮ ದೇಶದಲ್ಲಿ ಸಂವಿಧಾನ ವಿರೋಧಿಗಳೂ ಇದ್ದಾರೆ. ಈ ಬಗ್ಗೆ ನಮಗೆ ಎಚ್ಚರಿಕೆ ಇರಬೇಕು. ಸಂವಿಧಾನ ಜಾರಿಗೆ ಹಿಂದೂ ಮಹಾ ಸಭಾದ ಸಾವರ್ಕರ್, ಗೋಳ್ವಾಳ್ಕರ್ ಕೂಡ ವಿರೋಧಿಸಿದ್ದರು. ಬಿಜೆಪಿಯ ಮಾತೃಪಕ್ಷ ಆರ್.ಎಸ್.ಎಸ್ ನವರು ಕೂಡ ನಮ್ಮ ಸಂವಿಧಾನ ಜಾರಿಯನ್ನು ವಿರೋಧಿಸಿದ್ದರು.