ಬೆಂಗಳೂರು: ‘ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದಕ್ಕೆ ಹೊಟ್ಟೆ ಉರಿಯಿಂದ ನನ್ನ ವಿರುದ್ಧ ಬಿಜೆಪಿ–ಜೆಡಿಎಸ್ನವರು ಮಾಡಬಾರದ್ದನ್ನೆಲ್ಲ ಮಾಡುತ್ತಿದ್ದಾರೆ. ನನ್ನ ಮೇಲೆ ಸುಳ್ಳು ಆರೋಪ ಮಾಡುತ್ತಿದ್ದಾರೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದರು.

ಕೆಪಿಸಿಸಿ ಕಚೇರಿಯಲ್ಲಿ ಸದ್ಭಾವನಾ ದಿನಾಚರಣೆ ಹಾಗೂ ಡಿ. ದೇವರಾಜ ಅರಸು ಜಯಂತಿ ಅಂಗವಾಗಿ, ರಾಜೀವ್ ಗಾಂಧಿ ಹಾಗೂ ದೇವರಾಜ ಅರಸು ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು.

‘ರಾಜೀವಗಾಂಧಿ ಹಾಗೂ ದೇವರಾಜ ಅರಸರ ಬದುಕು- ಕೆಲಸಗಳು ನಮಗೆ ಮಾರ್ಗದರ್ಶಿ. ಅವರ ಹಾದಿಯಲ್ಲಿ ನಾವು ನಡೆಯಬೇಕು’ ಎಂದು ಅವರು ಅಭಿಪ್ರಾಯಪಟ್ಟರು.

‘ರಾಜೀವ್ ಗಾಂಧಿ ಪ್ರಧಾನಿಯಾಗಿದ್ದಾಗ ಆಧುನಿಕ ಭಾರತದ ಕನಸು ಕಂಡಿದ್ದರು. ಯುವಜನತೆಯ ಮೇಲೆ ಅಪಾರ ವಿಶ್ವಾಸ ಇಟ್ಟುಕೊಂಡಿದ್ದರು. ಅವರು ದೇಶದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಬೆಳವಣಿಗೆಗೆ ಕಾರಣಕರ್ತರಾಗಿದ್ದರು. ಯಾವಾಗಲೂ ಸಾಮಾಜಿಕ ನ್ಯಾಯದ ಪರ ಇದ್ದರು. ದೇಶದಲ್ಲಿ ಬದಲಾವಣೆ ಆಗಬೇಕು. ಸಮಾನ ಅವಕಾಶ ಸಿಗಬೇಕು ಎಂದು ಹಂಬಲಿಸಿದರು. ಯಾವುದೇ ಜಾತಿ, ಧರ್ಮ, ಭಾಷೆ, ಪ್ರಾದೇಶಿಕತೆ ಭೇದ ಮರೆತು, ಎಲ್ಲೇ ಇದ್ದರೂ ಭಾರತೀಯರು ಒಗ್ಗಟ್ಟಾಗಿರಬೇಕು ಎಂಬ ಕನಸನ್ನು ಕಂಡಿದ್ದರು’ ಎಂದರು.

‘ವಿಶೇಷವಾಗಿ ಮಹಿಳೆಯರಿಗೆ ರಾಜಕೀಯ ಕ್ಷೇತ್ರದಲ್ಲಿ ಪಾಲು ಸಿಗಬೇಕು. ಆಗ ಮಾತ್ರ ಸಮ ಸಮಾಜ ನಿರ್ಮಾಣ ಸಾಧ್ಯ ಎಂದು ಸಂವಿಧಾನಕ್ಕೆ 73 ಮತ್ತು 74 ನೇ ತಿದ್ದುಪಡಿಯನ್ನು ರಾಜೀವ್ ಗಾಂಧಿ ಜಾರಿಗೆ ತಂದರು. ಈ ದೇಶದಲ್ಲಿ ಏನಾದರೂ ಮಹಿಳೆಯರಿಗೆ ರಾಜಕೀಯದಲ್ಲಿ ಪಾಲು ಸಿಕ್ಕಿದ್ದರೆ, ಸಂವಿಧಾನಕ್ಕೆ ತಂದ ಈ ತಿದ್ದುಪಡಿಗಳು ಕಾರಣ’ ಎಂದರು.

‘ಬಿಜೆಪಿಯವರು ತಾವು ಹಿಂದುಳಿದವರು, ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ , ಪರಿಶಿಷ್ಟ ಪಂಗಡವರ ಪರ ಎಂದು ಎಷ್ಟೇ ಹೇಳಿಕೊಂಡರೂ, ಅವರು ಬಡವರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರ ಪರ ಇರಲು ಸಾಧ್ಯವೇ ಇಲ್ಲ. ಬಡವರಿಗೆ ಅವರು ಯಥಾಸ್ಥಿತಿಯಲ್ಲಿರಬೇಕು. ಅವರಿಗೆ ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿ ಬರಬಾರದು ಎಂದು ಬಯಸುತ್ತಾರೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘ರಾಜೀವ ಗಾಂಧಿಯವರು ಇನ್ನೂ ಬದುಕಿರಬೇಕಾಗಿತ್ತು. ಅವರು ಇದ್ದಿದ್ದರೆ ದೇಶದಲ್ಲಿ ನಿಜವಾದ ಬದಲಾವಣೆ ಆಗಿರುತ್ತಿತ್ತು. ದೂರದೃಷ್ಟಿ, ದೇಶ, ಸಮಾಜದ ಬಗ್ಗೆ ಕಾಳಜಿ ಇದ್ದವರು, ಬಹಳ ಚಿಕ್ಕ ವಯಸ್ಸಿನಲ್ಲಿಯೇ ನಮ್ಮನ್ನು ಅಗಲಿದರು’ ಎಂದು ವಿಷಾದಿಸಿದರು.

‘ದೇವರಾಜ ಅರಸು ಅವರು 1972ರಿಂದ ದೀರ್ಘ ಕಾಲ ರಾಜ್ಯದ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದರು.

ಅರಸು ಅವರನ್ನು ಸಾಮಾಜಿಕ ನ್ಯಾಯದ ಹರಿಕಾರ ಎಂದು ಕರೆಯುತ್ತೇವೆ. ಹಾವನೂರ ಆಯೋಗದ ರಚನೆ ಮಾಡಿ, ಹಿಂದುಳಿದವರಿಗೆ ಶಿಕ್ಷಣ ಉದ್ಯೋಗದಲ್ಲಿ ಮೀಸಲಾತಿ ಒದಗಿಸಿದರು. ಸಮಾಜದಲ್ಲಿ ನಿರ್ಲಕ್ಷ್ಯಕ್ಕೆ ಒಳಗಾದವರನ್ನು ರಾಜಕೀಯವಾಗಿ ಗುರುತಿಸಿ, ಅವರಿಗೆ ಚುನಾವಣೆಯಲ್ಲಿ ನಿಲ್ಲಲು ಅವಕಾಶ ಕೊಟ್ಟರು. ವಿಧಾನಸೌಧದ ಮೆಟ್ಟಿಲು ಹತ್ತಲು ಸಾಧ್ಯವೇ ಇಲ್ಲ ಎಂದುಕೊಂಡವರೂ ವಿಧಾನಸೌಧ ಪ್ರವೇಶಿಸುವಂತೆ ಮಾಡಿದರು’ ಎಂದರು.

ಪತ್ರಿಕೆಯಲ್ಲಿ ಓದಿದ ಘಟನೆಯೊಂದನ್ನು ನೆನಪಿಸಿಕೊಂಡ ಮುಖ್ಯಮಂತ್ರಿ, ‘ಅರಸು ಅವರು ಕೆಪಿಸಿಸಿ ಅಧ್ಯಕ್ಷರಾಗಿದ್ದಾಗ, ಜಾಫರ್ ಷರೀಫ್ ಅವರಿಗೆ ಟಿಕೆಟ್ ಕೊಟ್ಟರು. ನಾಗರತ್ನಮ್ಮ ಅವರು ಜಟಕಾ ಗಾಡಿ ಓಡಿಸುವವರಿಗೆ ಟಿಕೆಟ್ ಕೊಡ್ತೀಯಲ್ಲ ಎಂದು ಕೇಳಿದರು. ನೋಡಮ್ಮಾ, ಇನ್ನು ಮೇಲೆ ಜಟಕಾ ಸಾಹೇಬರಿಗೆ, ಕ್ಷೌರ ಮಾಡುವವರಿಗೆ ಟಿಕೆಟ್ ಕೊಡೋದು, ಶೋಕಿ ಮಾಡುವವರಿಗಲ್ಲ ಎಂದು ಉತ್ತರಿಸಿದರಂತೆ’ ಎಂದರು.

‘ಮಲ ಹೊರುವ ಪದ್ಧತಿ, ಜೀತ ಪದ್ಧತಿ ನಿಷೇಧ, ಸಾಲ ಮನ್ನಾ ಇಂತಹ ಅನೇಕ ಪ್ರಗತಿ ಪರ ಕಾನೂನುಗಳನ್ನು ಮಾಡಿದ ಅವರು, ಅರಸು ಮನೆತನದಲ್ಲಿ ಹುಟ್ಟಿದರೂ ಹಿಂದುಳಿದವರು, ದಲಿತರು, ಅಲ್ಪಸಂಖ್ಯಾತರ ಪರವಾಗಿ ಕೆಲಸ ಮಾಡಿದರು’ ಎಂದೂ ಬಣ್ಣಿಸಿದರು.

‘ಕಾಂಗ್ರೆಸ್ ಪಕ್ಷ ಅಸಮಾನತೆಯನ್ನು ಹೋಗಲಾಡಿಸಲು ಬಯಸುತ್ತದೆ. ಈಗಲೂ ಅಸಮಾನತೆ ವಿರುದ್ಧ ಹೋರಾಟ ಮಾಡುತ್ತಿದೆ. ಅದಕ್ಕೆ ಬಿಜೆಪಿಯವರಿಗೆ ಸಹಿಸಲಾಗುತ್ತಿಲ್ಲ. ಅಸಮಾನತೆ ವಿರುದ್ಧ ಕಾರ್ಯಕ್ರಮ ನೀಡುತ್ತೇನೆಂಬ ಕಾರಣಕ್ಕೇ ಬಿಜೆಪಿ ನನ್ನನ್ನು ಸಹಿಸುತ್ತಿಲ್ಲ’ ಎಂದು ತಿಳಿಸಿದರು.

ಸಚಿವರಾದ ಕೆ.ಜೆ. ಜಾರ್ಜ್, ರಾಮಲಿಂಗಾರೆಡ್ಡಿ, ಈಶ್ವರ ಖಂಡ್ರೆ ಇದ್ದರು.
.ಸಿಎಂ ಸ್ಥಾನದಿಂದ ಸಿದ್ದರಾಮಯ್ಯ ಬದಲಾವಣೆ ಸಾಧ್ಯವೇ ಇಲ್ಲ: ಸತೀಶ ಜಾರಕಿಹೊಳಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.