ಬೆಂಗಳೂರು: ದೇವಸ್ಥಾನಗಳ ಜೀರ್ಣೋದ್ಧಾರಕ್ಕೆ ಅನುದಾನ ತಡೆ ಹಿಡಿಯುವಂತೆ ಧಾರ್ಮಿಕ ದತ್ತಿ ಇಲಾಖೆ ಆದೇಶಿಸಿದೆ.

ಬೆನಲ್ಲೇ ಆದೇಶ ಹಿಂಪಡೆಯಬೇಕು ಎಂದು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಸೂಚಿಸಿದ್ದಾರೆ.

2022-23ನೇ ಸಾಲಿನಲ್ಲಿ ಬಿಡುಗಡೆಯಾಗಿರುವ ಅನುದಾನದಲ್ಲಿ, ದೇವಸ್ಥಾನ ಜೀರ್ಣೋದ್ದಾರ ಕಾಮಗಾರಿ ಇನ್ನೂ ಪ್ರಾರಂಭ ಆಗದಿದ್ದರೆ ಹಣ ಬಿಡುಗಡೆ ಮಾಡಬಾರದು, ಶೇ 50 ರಷ್ಟು ಹಣ ಬಿಡುಗಡೆಗೆ ಆಡಳಿತಾತ್ಮಕ ಅನುಮೋದನೆ ನೀಡಿದ್ದರೆ ತಕ್ಷಣ ಅನುದಾನ ತಡೆ ಹಿಡಿಯಬೇಕು, ಅನುದಾನದ ಮಂಜೂರಾತಿಗೆ ಪ್ರಸ್ತಾವನೆ ಸಲ್ಲಿಕೆಯಾಗಿದ್ದರೆ ಆಡಳಿತಾತ್ಮಕ ಮಂಜೂರಾತಿಯನ್ನು ತಡೆಹಿಡಿಯಬೇಕು ಎನ್ನುವ ಮೂರು ವಿಷಯಗಳನ್ನು ಪ್ರಸ್ತಾಪಿಸಿ ದೇವಸ್ಥಾನಗಳ ಜೀರ್ಣೋದ್ಧಾರ ಅನುದಾನ ಬಿಡುಗಡೆ ತಡೆಹಿಡಿಯಬೇಕು ಎಂದು ಧಾರ್ಮಿಕ ದತ್ತಿ ಇಲಾಖೆ ಆದೇಶ ನೀಡಿತ್ತು.

ಬೆನ್ನಲ್ಲೇ ಆದೇಶ ವಾಪಸ್ ಪಡೆಯುವಂತೆ ಇಲಾಖೆಯ ಆಯುಕ್ತರಿಗೆ ಸಚಿವ ರಾಮಲಿಂಗಾ ರೆಡ್ಡಿ ಸೂಚನೆ ನೀಡಿದ್ದಾರೆ.

ಗೊಂದಲದಿಂದಾಗಿ ಆಯುಕ್ತರು ಹಣ ತಡೆಹಿಡಿಯುವ ಆದೇಶ ಮಾಡಿದ್ದರು ಎಂದು ಗೊತ್ತಾಗಿದೆ. ಸಚಿವರ ಸೂಚನೆ ಬೆನ್ನಲ್ಲೇ ಆಯುಕ್ತರು ಆದೇಶ ಪಾಪಸ್ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.