ಬೆಂಗಳೂರು: ರಾಜ್ಯದಲ್ಲಿ 15 ಸಾವಿರ ಪದವೀಧರ ಪ್ರಾಥಮಿಕ ಶಿಕ್ಷಕರ (6ರಿಂದ 8ನೇ ತರಗತಿ) ನೇಮಕಾತಿಯಲ್ಲಿ ಎಲ್ಲ ವರ್ಗದ ಅಭ್ಯರ್ಥಿಗಳಿಗೆ ಎರಡು ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ.

ಎಸ್‌ಸಿ, ಎಸ್‌ಟಿ, ಪ್ರವರ್ಗ–1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 47, ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಪ್ರವರ್ಗದ ಅಭ್ಯರ್ಥಿಗಳಿಗೆ 45, ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 42 ವರ್ಷ ಗರಿಷ್ಠ ವಯೋಮಿತಿ ನಿಗದಿಪಡಿಸಲಾಗಿದೆ.

ಅಲ್ಲದೆ, ಪ್ರತಿ ಪ್ರವರ್ಗಗಳಲ್ಲಿ ಶೇ 50ರಷ್ಟು ಹುದ್ದೆಗಳನ್ನು ಮಹಿಳೆಯರಿಗೆ, ಶೇ 1ರಷ್ಟು ಹುದ್ದೆಗಳನ್ನು ತೃತೀಯ ಲಿಂಗದ ಅಭ್ಯರ್ಥಿಗಳಿಗೆ ಮೀಸಲಿಡಲಾಗಿದೆ.

ನೇಮಕಾತಿಗೆ ಪ್ರಕ್ರಿಯೆಗೆ ಪೂರಕವಾಗಿ, ಕರ್ನಾಟಕ ಶಿಕ್ಷಣ ಇಲಾಖೆ ಸೇವೆಗಳು (ಸಾರ್ವಜನಿಕ ಶಿಕ್ಷಣ ಇಲಾಖೆ) ನೇಮಕಾತಿ ವಿಶೇಷ ನಿಯಮಗಳು–2022’ಅನ್ನು ಅಂತಿಮಗೊಳಿಸಿ ರಾಜ್ಯ ಸರ್ಕಾರ ಸರ್ಕಾರ ಮಂಗಳವಾರ ಅಧಿಸೂಚನೆ ಹೊರಡಿಸಿದೆ.

ಎಂಜಿನಿಯರಿಂಗ್ ಓದಿವರಿಗೂ ಅವಕಾಶ: ಗಣಿತ ಮತ್ತು ವಿಜ್ಞಾನ ವಿಷಯ ಬೋಧಿಸಲು ಮೊದಲ ಬಾರಿಗೆ ಎಂಜಿನಿಯರಿಂಗ್ ಕಲಿತವರಿಗೂ ಅವಕಾಶ ಕಲ್ಪಿಸಲಾಗಿದೆ.

ಪದವಿಯಲ್ಲಿ ಗಣಿತ, ಭೌತವಿಜ್ಞಾನ ವಿಷಯಗಳನ್ನು ಐಚ್ಚಿಕವಾಗಿ ಮೂರು ವರ್ಷ ಕಡ್ಡಾಯವಾಗಿ ಕಲಿತ ಪದವೀಧರರು ಈ ವಿಷಯದ ಜೊತೆಗೆ ರಸಾಯನವಿಜ್ಞಾನ, ಗಣಕಶಾಸ್ತ್ರ, ಎಲೆಕ್ಟ್ರಾನಿಕ್ಸ್, ಸಂಖ್ಯಾಶಾಸ್ತ್ರ, ಭೂಗರ್ಭ ವಿಜ್ಞಾನ ಈ ವಿಷಯಗಳಲ್ಲಿ ಯಾವುದಾದರೂ ಒಂದನ್ನು ಐಚ್ಚಿಕವಾಗಿ (ಮೂರನೇ ವಿಷಯವಾಗಿ) ಪದವಿಯಲ್ಲಿ ಓದಿರಬೇಕು. ಅಥವಾ ವಾಸ್ತು ಶಿಲ್ಪ ಪದವೀಧರಲ್ಲದ ಎಂಜಿನಿಯರಿಂಗ್ ಪದವೀಧರರು ಪ್ರಥಮ ಮೂರು, ನಾಲ್ಕನೇ ಸೆಮಿಸ್ಟರ್‌ಗಳಲ್ಲಿ ಗಣಿತ ಮತ್ತು ಉಳಿದ ಸೆಮಿಸ್ಟರ್‌ಗಳಲ್ಲಿ ಅನ್ವಯಿಕ ಗಣಿತ ಓದಿದವರೂ ಅರ್ಹರು ಎಂದು ನಿಯಮ ರೂಪಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.